ಭಾರತದಲ್ಲಿ 12 ಲಕ್ಷಕ್ಕೂ ಹೆಚ್ಚು ಕೊರೊನಾವೈರಸ್ ಸಕ್ರಿಯ ಪ್ರಕರಣ!
ನವದೆಹಲಿ, ಏಪ್ರಿಲ್ 12: ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಎರಡನೇ ಅಲೆ ಭಾರತೀಯರಲ್ಲಿ ಭಯವನ್ನು ಹುಟ್ಟಿಸುತ್ತಿದೆ. ಪ್ರತಿನಿತ್ಯ ದಾಖಲೆ ಮಟ್ಟದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗುತ್ತಿವೆ.
ದೇಶದಲ್ಲಿ ಒಂದೇ ದಿನ 168912 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ ಮಹಾಮಾರಿಗೆ 904 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 1,70,179ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಸೋಮವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು 1,35,27,717 ಕೊರೊನಾವೈರಸ್ ಸೋಂಕಿತ ಪ್ರಕರಣ ವರದಿಯಾಗಿವೆ. ಒಂದು ದಿನದಲ್ಲಿ 75,086 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರ ಸಂಖ್ಯೆ 1,21,56,529ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 12,01,009 ಗಡಿಯನ್ನೂ ದಾಟಿ ಹೋಗಿದೆ.

ಕೊರೊನಾವೈರಸ್ ಸೋಂಕಿಗೆ ಲಸಿಕೆ:
ದೇಶದಲ್ಲಿ ಈವರೆಗೂ 10,45,28,565 ಮಂದಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ. ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ.
ಜಗತ್ತಿನಲ್ಲಿ ಕೊರೊನಾವೈರಸ್ ಅಂಕಿ-ಸಂಖ್ಯೆ:
ವಿಶ್ವದಲ್ಲಿ ಒಂದೇ ದಿನ ಒಟ್ಟು 6,19,919 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಜಗತ್ತಿನಾದ್ಯಂತ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 13,66,15,916ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಮಹಾಮಾರಿಗೆ 7705 ಜನರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 29,48,856ಕ್ಕೆ ಏರಿಕೆಯಾಗಿದೆ. ಈವರೆಗೂ ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೊವಿಡ್-19 ಸೋಂಕಿಗೆ ನೀಡಿದ ಚಿಕಿತ್ಸೆಯಿಂದಾಗಿ ಒಟ್ಟು 10,98,41,859 ಸೋಂಕಿತರು ಗುಣಮುಖರಾಗಿದ್ದಾರೆ. ಈ ಪೈಕಿ 2,38,25,201 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ.












Click it and Unblock the Notifications