• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

1.50 ಲಕ್ಷ ಕೋವಿಡ್ ಸಾವು ಕಂಡ ಮೂರನೇ ದೇಶ ಭಾರತ

|

ನವದೆಹಲಿ, ಜನವರಿ 6: ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸತತವಾಗಿ 20 ಸಾವಿರಕ್ಕಿಂತ ಕಡಿಮೆ ದೈನಂದಿನ ಕೊರೊನಾ ವೈರಸ್ ಪ್ರಕರಣಗಳು ದಾಖಲಾಗುತ್ತಿವೆ. ಮಂಗಳವಾರದ ವೇಳೆಗೆ ಭಾರತದಲ್ಲಿ 18,088 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿವೆ ಎಂದು ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ 264 ಮಂದಿ ಸಾವಿಗೀಡಾಗಿದ್ದಾರೆ. ಸೋಮವಾರಕ್ಕೆ ಹೋಲಿಸಿದರೆ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಹಾಗೆಯೇ ಗುಣಮುಖರಾದವರ ಒಟ್ಟಾರೆ ಸಂಖ್ಯೆಯಲ್ಲಿಯೂ ಇಳಿಕೆಯಾಗಿದೆ. ಆದರೆ ಸಕ್ರಿಯ ಪ್ರಕರಣಗಳಲ್ಲಿ ಮತ್ತಷ್ಟು ಇಳಿಕೆಯಾಗಿರುವುದು ಸಮಾಧಾನಕರ ಸಂಗತಿ.

ಎಸ್‌ಎಂಎಸ್, ಆಧಾರ್, ಆಪ್: ಕೊರೊನಾ ಲಸಿಕೆ ನೀಡುವ ಕಾರ್ಯಕ್ರಮ ಹೇಗಿರಲಿದೆ? 10 ಅಂಶಗಳು

ಒಂದೇ ದಿನ 21,314 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಒಟ್ಟು ಪ್ರಕರಣಗಳು 1,03,74,932 ದಾಖಲಾಗಿದ್ದು, ಸಕ್ರಿಯ ಪ್ರಕರಣಗಳು 2,27,546 ಕ್ಕೆ ಇಳಿಕೆಯಾಗಿದೆ. ಇದುವರೆಗೂ ಒಟ್ಟು 99,97,272 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು 1,50,114 ವೈರಸ್‌ನಿಂದ ಮೃತಪಟ್ಟಿದ್ದಾರೆ.

ಅಮೆರಿಕ ಹಾಗೂ ಬ್ರೆಜಿಲ್ ಬಳಿಕ 1.50 ಲಕ್ಷ ಕೋವಿಡ್ ಸಂಬಂಧಿ ಸಾವುಗಳನ್ನು ಹೊಂದಿರುವ ದೇಶಗಳಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆ. ಚೆನ್ನೈನಲ್ಲಿ ಮತ್ತೆ ಮೂವರಲ್ಲಿ ಕೊರೊನಾ ವೈರಸ್‌ನ ಹೊಸ ರೂಪಾಂತರ ಇರುವುದು ಪತ್ತೆಯಾಗಿದೆ. ಇದುವರೆಗೂ ನಾಲ್ವರಲ್ಲಿ ರೂಪಾಂತರ ವೈರಸ್ ಕಂಡುಬಂದಿದೆ ಎಂದು ತಮಿಳುನಾಡು ಆರೋಗ್ಯ ಕಾರ್ಯದರ್ಶಿ ಡಾ. ರಾಧಾಕೃಷ್ಣನ್ ತಿಳಿಸಿದ್ದಾರೆ.

English summary
18,088 new coronavirus cases were reported in India. 264 people died due to virus in last 24 hours and 21,314 got discharged.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X