ಭಾರತದಲ್ಲಿ ಮತ್ತೆ ಏರುತ್ತಿದೆ ಕೊರೊನಾ ಸೋಂಕಿತರ ಸಂಖ್ಯೆ
ನವದೆಹಲಿ, ಮಾರ್ಚ್ 07: ಭಾರತದಲ್ಲಿ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ದಿನೇ ದಿನೇ ಸಾವಿರಾರು ಪ್ರಕರಣಗಳು ಹೆಚ್ಚುತ್ತಿವೆ. ಒಂದೆಡೆ ದೇಶಾದ್ಯಂತ ಕೊರೊನಾ ಲಸಿಕೆ ಅಭಿಯಾನವು ಕೂಡ ಪ್ರಗತಿಯಿಂದ ಸಾಗಿದೆ.
ಇಂದು ದೇಶದಲ್ಲಿ 18,711 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. 14,392 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 100 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು 1,12,10,799 ಪ್ರಕರಣಗಳಿವೆ. ಇದುವರೆಗೆ 1,08,68,520 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1,84,523 ಸಕ್ರಿಯ ಪ್ರಕರಣಗಳಿವೆ. 1,57,756 ಮಂದಿ ಸಾವನ್ನಪ್ಪಿದ್ದಾರೆ.
ಇದುವರೆಗೆ 2,09,22,344 ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ. ಕಳೆದ 24 ಗಂಟೆಯಲ್ಲಿ ಬರೋಬ್ಬರಿ 15 ಲಕ್ಷ ಮಂದಿಗೆ ಕೋವಿಡ್ ಲಸಿಕೆ ಹಾಕಲಾಗಿದ್ದು, 14,92,201 ಡೋಸ್ ಲಸಿಕೆಯನ್ನು ನೀಡಲಾಗಿದೆ.

ಈ ಮಧ್ಯೆ, ದೇಶದಲ್ಲಿ ಕೋವಿಡ್‍ನ 18,327 ಹೊಸ ಪ್ರಕರಣಗಳು ವರದಿಯಾಗುವುದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 1,11,92,88ಕ್ಕೆ ಮುಟ್ಟಿದೆ. ಕಳೆದ 24 ತಾಸಿನಲ್ಲಿ 14,234 ಮಂದಿ ಸೋಂಕಿನಿಂದ ಗುಣಮುಖರಾಗುವುದರೊಂದಿಗೆ ಈವರೆಗೆ ಚೇತರಿಸಿಕೊಂಡವರ ಸಂಖ್ಯೆ 1,08, 54,128ಕ್ಕೆ ಏರಿದೆ.












Click it and Unblock the Notifications