ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಭಾರತದಲ್ಲಿ 18 ಸಾವಿರಕ್ಕೂ ಅಧಿಕ ಕೋವಿಡ್ ಪ್ರಕರಣ ದಾಖಲು

|
Google Oneindia Kannada News

ನವದೆಹಲಿ, ಆಗಸ್ಟ್ 07: ಕಳೆದ ಒಂದು ದಿನದಲ್ಲಿ ದೇಶದಲ್ಲಿ 18,738 ಹೊಸ ಕೊರೊನಾ ವೈರಸ್ ಸೋಂಕುಗಳು ವರದಿಯಾಗುವುದರೊಂದಿಗೆ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 4,41,45,732 ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು 1,34,933 ಕ್ಕೆ ಏರಿಕೆಯಾಗಿದೆ ಎಂದು ಭಾನುವಾರ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ.

ಕಳೆದ 24 ಗಂಟೆಗಳ ಅವಧಿಯಲ್ಲಿ 40 ಸಾವುಗಳು ದಾಖಲಾಗಿ ಒಟ್ಟು ಸಾವಿನ ಸಂಖ್ಯೆ 5,26,689 ಕ್ಕೆ ಏರಿದೆ. ಇದರಲ್ಲಿ ಎಂಟು ಸಾವುಗಳು ಕೇರಳದಿಂದ ವರದಿಯಾಗಿವೆ ಎಂದು ಅಂಕಿಅಂಶಗಳು ತಿಳಿಸಿವೆ. ರಾಷ್ಟ್ರೀಯ ಕೊರೊನಾ ಚೇತರಿಕೆ ದರವು 98.50 ಪ್ರತಿಶತದಷ್ಟು ದಾಖಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

18,738 New Covid Cases Reported In India 40 deaths

ಭಾರತದಲದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯು ಆಗಸ್ಟ್ 7, 2020 ರಂದು 20 ಲಕ್ಷದ ಗಡಿಯನ್ನು ದಾಟಿದೆ. ಆಗಸ್ಟ್ 23 ರಂದು 30 ಲಕ್ಷ, ಸೆಪ್ಟೆಂಬರ್ 5 ರಂದು 40 ಲಕ್ಷ ಮತ್ತು ಸೆಪ್ಟೆಂಬರ್ 16 ರಂದು 50 ಲಕ್ಷ ದಾಟಿದೆ.

ಈ ಸಂಖ್ಯೆಯು ಸೆಪ್ಟೆಂಬರ್ 28 ರಂದು 60 ಲಕ್ಷ, ಅಕ್ಟೋಬರ್ 11 ರಂದು 70 ಲಕ್ಷವನ್ನು ದಾಟಿದೆ. ಅಕ್ಟೋಬರ್ 29 ರಂದು 80 ಲಕ್ಷ, ನವೆಂಬರ್ 20 ರಂದು 90 ಲಕ್ಷ ಮತ್ತು ಡಿಸೆಂಬರ್ 19 ರಂದು ಒಂದು ಕೋಟಿ ಗಡಿ ದಾಟಿದೆ.

English summary
India recorded 18,738 new Covid cases, 40 deaths in the last 24 hours
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X