ಭಾರತದಲ್ಲಿ 201 ದಿನಗಳ ಹೊಸ ದಾಖಲೆ ಬರೆದ ಕೊರೊನಾವೈರಸ್!

ನವದೆಹಲಿ, ಸಪ್ಟೆಂಬರ್ 28: ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 201 ದಿನಗಳ ಬಳಿಕ ದಾಖಲೆಯ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 20,000ಕ್ಕಿಂತಲೂ ಕಡಿಮೆ ಸೋಂಕಿತ ಪ್ರಕರಣಗಳು ವರದಿಯಾಗಿವೆ.

ಕಳೆದ 24 ಗಂಟೆಗಳಲ್ಲಿ 18,795 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 179 ಮಂದಿ ಮಹಾಮಾರಿಗೆ ಬಲಿಯಾಗಿದ್ದರೆ, 26,030 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಮಂಗಳವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಕೊರೊನಾವೈರಸ್ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3,36,97,581ಕ್ಕೆ ಏರಿಕೆಯಾಗಿದೆ. ಇದುವರೆಗೂ 32,9,58,002 ಸೋಂಕಿತರು ಗುಣಮುಖರಾಗಿದ್ದು, 4,47,373 ಜನರು ಸೋಂಕಿನಿಂದ ಸಾವಿನ ಮನೆ ಸೇರಿದ್ದಾರೆ. ಇದರ ಹೊರತಾಗಿ ದೇಶದಲ್ಲಿ 2,92,206 ಸಕ್ರಿಯ ಪ್ರಕರಣಗಳಿವೆ.

ಕೊರೊನಾವೈರಸ್ ಪರೀಕ್ಷೆಯ ಅಂಕಿ-ಸಂಖ್ಯೆ ಬದಲಾವಣೆ

ಕೊರೊನಾವೈರಸ್ ಪರೀಕ್ಷೆಯ ಅಂಕಿ-ಸಂಖ್ಯೆ ಬದಲಾವಣೆ

ದೇಶದಲ್ಲಿ ಕೊರೊನಾವೈರಸ್ ಸೋಂಕಿನ ಪರೀಕ್ಷೆ ಪ್ರಮಾಣ ಹೆಚ್ಚಳವಾಗುತ್ತಿದ್ದಂತೆ ಹೊಸ ಪ್ರಕರಣಗಳ ಸಂಖ್ಯೆಯೂ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 13,21,780 ಜನರಿಗೆ ಕೊವಿಡ್-19 ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ದೇಶದಲ್ಲಿ ಈವರೆಗೂ 56,57,30,031 ಜನರಿಗೆ ಕೊರೊನಾವೈರಸ್ ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

87 ಕೋಟಿ ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಣೆ

87 ಕೋಟಿ ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಣೆ

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಭೀತಿಯಲ್ಲಿ ಲಸಿಕೆ ವಿತರಣೆ ಅಭಿಯಾನವನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ದೇಶದಲ್ಲಿ 87 ಕೋಟಿಗೂ ಅಧಿಕ ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 255 ದಿನಗಳಾಗಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,02,22,525 ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದ್ದು, ಈವರೆಗೂ 87,07,08,636 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಮತ್ತು ಕೇಂದ್ರಾಡಲಿತ ಪ್ರದೇಶಗಳಿಗೆ ಈವರೆಗೂ 84,50,28,655 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಯಾವ ಹಂತದಲ್ಲಿ ಯಾರಿಗೆಷ್ಟು ಲಸಿಕೆ ವಿತರಣೆ?

ಯಾವ ಹಂತದಲ್ಲಿ ಯಾರಿಗೆಷ್ಟು ಲಸಿಕೆ ವಿತರಣೆ?

ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. 1,03,71,843 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 88,50,671 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,83,50,000 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 1,48,77,142 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

18 ವರ್ಷ ಮೇಲ್ಪಟ್ಟ 35,22,02,434 ಮಂದಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 7,69,64,427 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ. 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆಯಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ದೇಶದಲ್ಲಿ ಈವರೆಗೂ 45 ವರ್ಷ ಮೇಲ್ಪಟ್ಟ 15,74,83,194 ಜನರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 7,48,10,270 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ದೇಶದಲ್ಲಿ ಈವರೆಗೂ 63,86,88,470 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 23,06,91,500 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರ ಪೂರೈಸಿರುವ ಕೊರೊನಾವೈರಸ್ ಲಸಿಕೆ

ಕೇಂದ್ರ ಸರ್ಕಾರ ಪೂರೈಸಿರುವ ಕೊರೊನಾವೈರಸ್ ಲಸಿಕೆ

2021ರ ಸಪ್ಟೆಂಬರ್ 27ರ ಅಂಕಿ-ಅಂಶಗಳ ಪ್ರಕಾರ, 84,50,28,655 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

* ಪೂರೈಕೆಯಾದ ಲಸಿಕೆ ಪ್ರಮಾಣ - 84,50,28,655

* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 20,95,870

* ಕೊವಿಡ್-19 ಲಸಿಕೆಯ ಲಭ್ಯತೆ - 4,74,80,540

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+