• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

24 ಗಂಟೆ, 18327 ಕೇಸ್: ಭಾರತದಲ್ಲಿ ಭಯ ಹುಟ್ಟಿಸಿದ ಕೊರೊನಾವೈರಸ್!

|

ನವದೆಹಲಿ, ಮಾರ್ಚ್.06: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲೇ 18327 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ದೇಶದಲ್ಲಿ ಕೊರೊನಾವೈರಸ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ. ಒಂದು ದಿನದಲ್ಲಿ 108 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 1,57,656ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊರೊನಾ ಲಸಿಕೆ ಪಡೆಯುವ ಮುನ್ನ, ನಂತರ ಏನು ಮಾಡಬೇಕು?

ಶನಿವಾರದ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ ಒಟ್ಟು 1,11,92,088 ಕೊರೊನಾವೈರಸ್ ಸೋಂಕಿತ ಪ್ರಕರಣಗಳಿವೆ. ಒಂದು ದಿನದಲ್ಲಿ 14,234 ಸೋಂಕಿತರು ಗುಣಮುಖರಾಗಿದ್ದು, ಈವರೆಗೂ 1,08,54,128 ಜನರಿಗೆ ನೀಡಿದ ಚಿಕಿತ್ಸೆ ಯಶಸ್ವಿಯಾಗಿದೆ. ಇದರ ಹೊರತಾಗಿ 1,80,304 ಸಕ್ರಿಯ ಪ್ರಕರಣಗಳಿವೆ ಎಂದು ಗೊತ್ತಾಗಿದೆ.

ಕೊರೊನಾವೈರಸ್ ಸೋಂಕಿಗೆ ಲಸಿಕೆ:

ದೇಶದಲ್ಲಿ ಈವರೆಗೂ 1,94,97,704 ಮಂದಿ ಆರೋಗ್ಯ ಕಾರ್ಯಕರ್ತರಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ. ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಮೊದಲ ಹಂತದ ಲಸಿಕೆ ನಂತರ ದೇಶದಲ್ಲಿ ಇದೀಗ ಎರಡನೇ ಹಂತದ ಲಸಿಕೆ ವಿತರಣೆ ಅಭಿಯಾನ ನಡೆಸಲಾಗುತ್ತಿದೆ.

ಜಗತ್ತಿನಲ್ಲಿ ಕೊರೊನಾವೈರಸ್ ಅಂಕಿ-ಸಂಖ್ಯೆ:

ವಿಶ್ವದಲ್ಲಿ ಒಂದೇ ದಿನ ಒಟ್ಟು 4,34,607 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಜಗತ್ತಿನಾದ್ಯಂತ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 11,66,47,742ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಮಹಾಮಾರಿಗೆ 9,317 ಜನರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 25,90,968ಕ್ಕೆ ಏರಿಕೆಯಾಗಿದೆ. ಇದುವರೆಗೂ ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೊವಿಡ್-19 ಸೋಂಕಿಗೆ ನೀಡಿದ ಚಿಕಿತ್ಸೆಯಿಂದಾಗಿ ಒಟ್ಟು 9,22,57,239 ಸೋಂಕಿತರು ಗುಣಮುಖರಾಗಿದ್ದಾರೆ. ಈ ಪೈಕಿ 2,17,99,535 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ.

English summary
18327 New Coronavirus Cases Reported in India in the Last 24 Hours
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X