ದೇಶದಲ್ಲಿ ಸಕ್ರಿಯ ಪ್ರಕರಣಗಳಲ್ಲಿ ಶೇ 10ರಷ್ಟು ಏರಿಕೆ

ನವದೆಹಲಿ, ಮಾರ್ಚ್ 8: ದೇಶದಲ್ಲಿನ ಕೋವಿಡ್ ಪ್ರಕರಣಗಳ ಸಂಖ್ಯೆ ಕಳೆದ ಮೂರು ವಾರಗಳಿಂದ ಹಂತಹಂತವಾಗಿ ಏರುಗತಿಯಲ್ಲಿ ಸಾಗಿದೆ. ಕಳೆದ ಏಳು ದಿನಗಳಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಶೇ 10ರಷ್ಟು ಹೆಚ್ಚಳ ಕಂಡಿರುವುದು ಆತಂಕ ಸೃಷ್ಟಿಸಿದೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 18,599 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇನ್ನು ಭಾನುವಾರದಂದು 14,278 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದರೆ, 97 ಸೋಂಕಿತರು ಜೀವ ಕಳೆದುಕೊಂಡಿದ್ದಾರೆ.

ದೇಶದಲ್ಲಿ ಇದುವರೆಗೂ ಒಟ್ಟು 1,12,29,398 ಪ್ರಕರಣಗಳು ವರದಿಯಾಗಿವೆ. ಒಟ್ಟು 1,08,82,798 ಮಂದಿ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಹೊಸ ಪ್ರಕರಣಗಳ ಏರಿಕೆಯಿಂದ ಸಕ್ರಿಯ ಪ್ರಕರಣಗಳು 1,88,747ಕ್ಕೆ ಏರಿಕೆಯಾಗಿದೆ. ಹಾಗೆಯೇ ಸಾವಿನ ಸಂಖ್ಯೆ 1,57,853ಕ್ಕೆ ತಲುಪಿದೆ.

 18,599 New Covid Cases, 97 Deaths Reported In India

ದೇಶದಲ್ಲಿ ಚೇತರಿಕೆಯ ಪ್ರಮಾಣವು ಇಂದು ಶೇ 96.95ಕ್ಕೆ ಕುಸಿದಿದೆ. ಒಟ್ಟು ಸಕ್ರಿಯ ಪ್ರಕರಣಗಳ ಪ್ರಮಾಣ ಕೂಡ ಶೇ 1.65ಕ್ಕೆ ಹೆಚ್ಚಿದೆ. ಜಾಗತಿಕ ಕೋವಿಡ್ ಪ್ರಕರಣಗಳ ಸಂಖ್ಯೆ 116.8 ಮಿಲಿಯನ್‌ಗೆ ತಲುಪಿದೆ. ಮಹಾರಾಷ್ಟ್ರ, ಕೇರಳ, ತಮಿಳುನಾಡು, ಕರ್ನಾಟಕ, ಪಂಜಾಬ್ ಮತ್ತು ಗುಜರಾತ್‌ಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯದ ವರದಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+