ಭಾರತದಲ್ಲಿ ಕೊರೊನಾವೈರಸ್ ಅಪಾಯ ಹೆಚ್ಚಿಸುವುದೇ ಕೇರಳ!?

ನವದೆಹಲಿ, ಸಪ್ಟೆಂಬರ್ 29: ಭಾರತದಲ್ಲಿನ ಕೊರೊನಾವೈರಸ್ ಸೋಂಕಿತ ಪ್ರಕರಣಗಳಲ್ಲಿ ಕೇರಳ ರಾಜ್ಯವೊಂದೇ ಸಿಂಹಪಾಲು ಪಡೆದುಕೊಳ್ಳುತ್ತಿದೆ. ದೇವರನಾಡಿನಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಏರಿಕೆಗೆ ಕಡಿವಾಣ ಇಲ್ಲದಂತೆ ಆಗಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 18,870 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 378 ಮಂದಿ ಮಹಾಮಾರಿಗೆ ಬಲಿಯಾಗಿದ್ದರೆ, 28,178 ಸೋಂಕಿತರು ಗುಣಮುಖರಾಗಿದ್ದಾರೆ. ಬುಧವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಕೊರೊನಾವೈರಸ್ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3,37,16,451ಕ್ಕೆ ಏರಿಕೆಯಾಗಿದೆ. ಇದುವರೆಗೂ 3,29,86,180 ಸೋಂಕಿತರು ಗುಣಮುಖರಾಗಿದ್ದು, 4,47,751 ಜನರು ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ ದೇಶದಲ್ಲಿ 2,82,520 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಒಂದೇ ದಿನ 18870 ಮಂದಿಗೆ ಕೊವಿಡ್-19 ಸೋಂಕು ತಗುಲಿದ್ದು, ಈ ಪೈಕಿ ಕೇರಳ ರಾಜ್ಯವೊಂದರಲ್ಲೇ 11,196 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ದೇಶದಲ್ಲಿ 378 ಸಾವಿನ ಪ್ರಕರಣ ವರದಿಯಾಗಿದ್ದರೆ, ಅದರಲ್ಲಿ 149 ಸಾವಿನ ಪ್ರಕರಣಗಳು ಕೇರಳದಲ್ಲಿ ವರದಿಯಾಗಿವೆ.

ಕೊರೊನಾವೈರಸ್ ಪರೀಕ್ಷೆಯ ಅಂಕಿ-ಅಂಶಗಳು

ಕೊರೊನಾವೈರಸ್ ಪರೀಕ್ಷೆಯ ಅಂಕಿ-ಅಂಶಗಳು

ದೇಶದಲ್ಲಿ ಕೊರೊನಾವೈರಸ್ ಸೋಂಕಿನ ಪರೀಕ್ಷೆ ಪ್ರಮಾಣ ಹೆಚ್ಚಳವಾಗುತ್ತಿದ್ದಂತೆ ಹೊಸ ಪ್ರಕರಣಗಳ ಸಂಖ್ಯೆಯೂ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 15,04,713 ಜನರಿಗೆ ಕೊವಿಡ್-19 ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ದೇಶದಲ್ಲಿ ಈವರೆಗೂ 56,74,50,185 ಜನರಿಗೆ ಕೊರೊನಾವೈರಸ್ ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

87.66 ಕೋಟಿ ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಣೆ

87.66 ಕೋಟಿ ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಣೆ

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಭೀತಿಯಲ್ಲಿ ಲಸಿಕೆ ವಿತರಣೆ ಅಭಿಯಾನವನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ದೇಶದಲ್ಲಿ 87.66 ಕೋಟಿಗೂ ಅಧಿಕ ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 256 ದಿನಗಳಾಗಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 54,13,332 ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದ್ದು, ಈವರೆಗೂ 87,66,63,490 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಮತ್ತು ಕೇಂದ್ರಾಡಲಿತ ಪ್ರದೇಶಗಳಿಗೆ ಈವರೆಗೂ 85,42,35,155 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಯಾವ ಹಂತದಲ್ಲಿ ಯಾರಿಗೆ ಎಷ್ಟು ಲಸಿಕೆ ವಿತರಣೆ?

ಯಾವ ಹಂತದಲ್ಲಿ ಯಾರಿಗೆ ಎಷ್ಟು ಲಸಿಕೆ ವಿತರಣೆ?

ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. 1,03,72,229 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 88,65,432 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,83,50,655 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 1,49,17,439 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

18 ವರ್ಷ ಮೇಲ್ಪಟ್ಟ 35,50,09,680 ಮಂದಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 7,88,45,995 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ. 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆಯಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ದೇಶದಲ್ಲಿ ಈವರೆಗೂ 45 ವರ್ಷ ಮೇಲ್ಪಟ್ಟ 15,81,86,738 ಜನರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 7,54,66,028 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ದೇಶದಲ್ಲಿ ಈವರೆಗೂ 64,25,70,102 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 23,36,19,310 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರ ಪೂರೈಸಿರುವ ಕೊರೊನಾವೈರಸ್ ಲಸಿಕೆ

ಕೇಂದ್ರ ಸರ್ಕಾರ ಪೂರೈಸಿರುವ ಕೊರೊನಾವೈರಸ್ ಲಸಿಕೆ

2021ರ ಸಪ್ಟೆಂಬರ್ 29ರ ಅಂಕಿ-ಅಂಶಗಳ ಪ್ರಕಾರ, 85,42,35,155 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

* ಪೂರೈಕೆಯಾದ ಲಸಿಕೆ ಪ್ರಮಾಣ - 85,42,35,155

* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 83,80,140

* ಕೊವಿಡ್-19 ಲಸಿಕೆಯ ಲಭ್ಯತೆ - 4,57,98,120

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+