ಉತ್ತರ ಪ್ರದೇಶ; 19 ವರ್ಷದ ಯುವತಿ ಮೇಲೆ ಅತ್ಯಾಚಾರ, ಕೊಲೆ
ಲಕ್ನೋ, ಅ. 06: ಉತ್ತರ ಪ್ರದೇಶದ ನಾಗ್ಲಾ ಶಿಶಮ್ ಗ್ರಾಮದಲ್ಲಿ 19 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕಮಲೇಶ್ ದೀಕ್ಷಿತ್ ಹೇಳಿದ್ದಾರೆ.
19 ವರ್ಷದ ಬಿಎಸ್ಸಿ ವಿದ್ಯಾರ್ಥಿನಿಯೊಬ್ಬಳನ್ನು ಬುಧವಾರ ಭೋಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಆಕೆಯ ಮನೆಯಲ್ಲಿ ಅತ್ಯಾಚಾರ ಮತ್ತು ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ನಡೆದಾಗ ವಿದ್ಯಾರ್ಥಿನಿ ತನ್ನ ಮನೆಯಲ್ಲಿ ಒಬ್ಬಳೇ ಇದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯ ತಂಗಿ ಶಾಲೆಯಿಂದ ಹಿಂದಿರುಗಿದಾಗ ಘಟನೆ ಬೆಳಕಿಗೆ ಬಂದಿದೆ.

ಸಂತ್ರಸ್ತೆಯ ಶವ ಅನುಮಾನಾಸ್ಪದವಾಗಿ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವತಿಯ ತಂದೆ ಕೆಲಸದ ನಿಮಿತ್ತ ಮೈನ್‌ಪುರಿಗೆ ತೆರಳಿದ್ದರೆ, ತಾಯಿ ಆಗ್ರಾಕ್ಕೆ ತೆರಳಿದ್ದರು. ಆಕೆಯ ಕಿರಿಯ ಸಹೋದರಿ ಶಾಲೆ ಮುಗಿಸಿ ಹಿಂತಿರುಗಿದಾಗ ಕಿಟಕಿಯಿಂದ ನೋಡಿದಾಗ ಶವ ನೇಣು ಬಿಗಿದ ಸ್ಥಿತಿಯಲ್ಲಿತ್ತು. ಮೃತ ಸಂತ್ರಸ್ತೆಯ ತಂಗಿ ಬಾಗಿಲು ತಟ್ಟುತ್ತಿದ್ದಂತೆಯೇ 20 ವರ್ಷದ ಆರೋಪಿಯೊಬ್ಬ ಬಾಗಿಲು ತೆರೆದು ಹೊರಗೆ ಓಡಿ ಬಂದಿದ್ದಾನೆ ಎಂದು ತಿಳಿಸಲಾಗಿದೆ.
ನಂತರ, ತನ್ನ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ ಎಂದು ಯುವತಿಯ ತಂದೆ ಆರೋಪಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕಮಲೇಶ್ ದೀಕ್ಷಿತ್ ಹೇಳಿದ್ದಾರೆ.
"ನಾಗ್ಲಾ ಶಿಶಮ್ ಗ್ರಾಮದಲ್ಲಿ ಯುವತಿಯ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ತಕ್ಷಣ ಕ್ರಮ ಕೈಗೊಂಡಿದ್ದಾರೆ. ಶೀಘ್ರವೇ ತಪ್ಪಿತಸ್ಥರನ್ನು ಬಂಧಿಸಿ ಕ್ರಮ ಕೈಗೊಳ್ಳಲಾಗುವುದು,'' ಎಂದು ಹೇಳಿದರು.
Uttar Pradesh | Police received information about the rape and murder of a girl in Nagla Shisham village. Police reached the spot; immediate action was taken. Action will be taken by arresting the guilty soon: Mainpuri SP Kamlesh Dixit (05.10) pic.twitter.com/y6XHX0sD44
— ANI UP/Uttarakhand (@ANINewsUP) October 5, 2022
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಕಳುಹಿಸಲಾಗಿದೆ, ಪೊಲೀಸ್ ತಂಡಗಳು ಆರೋಪಿಯ ಮನೆ ಮತ್ತು ಆತನ ಸಂಭಾವ್ಯ ಅಡಗುತಾಣಗಳ ಮೇಲೆ ದಾಳಿ ನಡೆಸಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಆರೋಪಿ ಪುಷ್ಪೇಂದ್ರ ತನ್ನ ಸಹೋದರಿಯನ್ನು ಕತ್ತು ಹಿಸುಕಿ ಕೊಂದಿದ್ದಾನೆ ಎಂದು ಮೃತಳ ಸಹೋದರಿ ಪೊಲೀಸರಿಗೆ ತಿಳಿಸಿದ್ದಾರೆ.












Click it and Unblock the Notifications