ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಖ್ ದಂಗೆ ಪ್ರಕರಣ: ಜೈಲುವಾಸಿ ಸಜ್ಜನ್ ಕುಮಾರ್ ಜಾಮೀನು ಅರ್ಜಿ ವಿಚಾರಣೆಗೆ

|
Google Oneindia Kannada News

ನವದೆಹಲಿ, ನವೆಂಬರ್ 05: 1984ರ ಸಿಖ್ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ಎನಿಸಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕಾಂಗ್ರೆಸ್ ಪಕ್ಷದ ಮಾಜಿ ನಾಯಕ ಸಜ್ಜನ್ ಕುಮಾರ್​(73) ಅವರ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ಪುರಸ್ಕರಿಸಿದೆ.

ರಂಜನ್ ಗೊಗಾಯ್ ಅಪ್ರ ಹಿರಿಯ ನ್ಯಾಯವಾದಿ ಶೇಖರ್ ನಫಡೆ ಅವರು ಅರ್ಜಿ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗಾಯ್ ಅವರಿದ್ದ ನ್ಯಾಯಪೀಠವು ಸಜ್ಜನ್ ಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ತ್ವರಿತವಾಗಿ ಕೈಗೆತ್ತಿಕೊಳ್ಳಲು ಒಪ್ಪಿಗೆ ಸೂಚಿಸಿದೆ. ದೆಹಲಿ ಹೈಕೋರ್ಟ್​ 1984ರ ಸಿಖ್ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ಇತ್ತೀಚೆಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

1984ರ ಸಿಖ್ ದಂಗೆ:ಕಾಂಗ್ರೆಸ್ಸಿನ ಸಜ್ಜನ್ ಕುಮಾರ್ ಗೆ ಜೀವಾವಧಿ ಶಿಕ್ಷೆ1984ರ ಸಿಖ್ ದಂಗೆ:ಕಾಂಗ್ರೆಸ್ಸಿನ ಸಜ್ಜನ್ ಕುಮಾರ್ ಗೆ ಜೀವಾವಧಿ ಶಿಕ್ಷೆ

ದೆಹಲಿ ಹೈಕೋರ್ಟ್ ನೀಡಿರುವ ಜೀವಾವಧಿ ಶಿಕ್ಷೆ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ಸಜ್ಜನ್ ಕುಮಾರ್, ಈ ಪ್ರಕರಣದ ವಿಚಾರಣೆ ಬಾಕಿ ಇರುವ ಕಾರಣ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

1984 anti-Sikh riots: SC To Consider According Urgent Hearing To Sajjan Kumars Bail Plea

ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಹತ್ಯೆ ನಡೆದ ಬೆನ್ನಲ್ಲೇ ನವೆಂಬರ್ 1 ಮತ್ತು 2ರಂದು ದೆಹಲಿಯ ಕೆಲವು ಪ್ರದೇಶಗಳಲ್ಲಿ ಸಿಖ್ ವಿರೋಧಿ ಗಲಭೆ ನಡೆದಿತ್ತು. ಆ ಗಲಭೆಯಲ್ಲಿ ಅನೇಕ ಮಂದಿ ಮೃತಪಟ್ಟಿದ್ದರು. ದೆಹಲಿ ದಂಡು ಪ್ರದೇಶದ ರಾಜ್ ನಗರದಲ್ಲಿ ಐದು ಮಂದಿ ಸಿಖ್ ಸಮುದಾಯದವರ ಸಾವು, ರಾಜ್ ನಗರ ಪಾರ್ಟ್ 2ನಲ್ಲಿದ್ದ ಗುರುದ್ವಾರಕ್ಕೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಸಜ್ಜನ್ ಕುಮಾರ್ ಅಪರಾಧಿಯಾಗಿದ್ದಾರೆ.

'ನಮ್ಮ ತಾಯಿಯ ಹತ್ಯೆ ಮಾಡಲಾಗಿದೆ. ಸರ್ದಾರರನ್ನು ಕೊಲ್ಲಿರಿ'!'ನಮ್ಮ ತಾಯಿಯ ಹತ್ಯೆ ಮಾಡಲಾಗಿದೆ. ಸರ್ದಾರರನ್ನು ಕೊಲ್ಲಿರಿ'!

"ನನ್ನ ತಾಯಿಯ (ಇಂದಿರಾ ಗಾಂಧಿ) ಹತ್ಯೆ ಮಾಡಲಾಗಿದೆ. ಸರ್ದಾರ್ ಗಳನ್ನು ಕೊಲ್ಲಿರಿ" ಎಂದು ಸಿಖ್ ಹತ್ಯಾಕಾಂಡಕ್ಕೆ ಪ್ರೇರೇಪಣೆ ನೀಡಿದ್ದ 73 ವರ್ಷದ ಹಿರಿಯ ರಾಜಕಾರಣಿ, ಕಾಂಗ್ರೆಸ್ ಧುರೀಣ ಸಜ್ಜನ್ ಕುಮಾರ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಐತಿಹಾಸಿಕ ತೀರ್ಪನ್ನು ಪಟಿಯಾಲಾ ಕೋರ್ಟ್ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

ನ್ಯಾಯಮೂರ್ತಿ ನಾನಾವತಿ ಆಯೋಗದ ಶಿಫಾರಸ್ಸಿನ ಆಧಾರದ ಮೇಲೆ ಸಜ್ಜನ್‌ ಕುಮಾರ್ ವಿರುದ್ಧ 2005ರಲ್ಲಿ ಮೊಕದ್ದಮೆ ದಾಖಲಾಗಿತ್ತು. ಅಲ್ಲದೆ ಸಿಬಿಐ 2010 ಜನವರಿಯಲ್ಲಿ ಕುಮಾರ್ ವಿರುದ್ಧ 2 ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಿತ್ತು. ಒಮ್ಮೆ ಜಾಮೀನು ಪಡೆದು ಹೊರಬಂದಿದ್ದ ಸಜ್ಜನ್ ಕುಮಾರ್ ಸದ್ಯ ಜೀವಾವಾಧಿ ಶಿಕ್ಷೆ ಅನುಭವಿಸುತ್ತಿದ್ದಾರೆ.

English summary
The Supreme Court on Monday agreed to consider according urgent hearing to the bail plea of former Congress leader Sajjan Kumar, sentenced for life by the Delhi High Court in a 1984 anti-Sikh riots case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X