ಭಾರತ; ಒಂದೇ ದಿನ 19,906 ಕೋವಿಡ್ -19 ಪ್ರಕರಣ ದಾಖಲು

ನವದೆಹಲಿ, ಜೂನ್ 28 : ಭಾರತದಲ್ಲಿ ಒಂದೇ ದಿನ 19,906 ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5,28,859ಕ್ಕೆ ಏರಿಕೆಯಾಗಿದೆ. 16,095 ಜನರು ಮೃತಪಟ್ಟಿದ್ದಾರೆ.

ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 19,906 ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದ್ದು, 410 ಜನರು ಮೃತಪಟ್ಟಿದ್ದಾರೆ. ಇದು ಒಂದೇ ದಿನದಲ್ಲಿ ದಾಖಲಾದ ಅತಿ ಹೆಚ್ಚಿನ ಪ್ರಕರಣಗಳಾಗಿವೆ.

ಇದೇ ಮೊದಲ ಬಾರಿಗೆ ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಒಂದೇ ದಿನದಲ್ಲಿ 19 ಸಾವಿರದ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ವಿಶ್ವದಲ್ಲಿ ಕೊರೊನಾ ವೈರಸ್ ಹೆಚ್ಚು ಇರುವ ಪಟ್ಟಿಯಲ್ಲಿ ದೇಶ 4ನೇ ಸ್ಥಾನದಲ್ಲಿದೆ.

In a Single Day 19 Thousand New COVID 19 Case And 410 Death In India

ಅಮೆರಿಕ, ಬ್ರೆಜಿಲ್, ರಷ್ಯಾ ಟಾಪ್ 3 ಸ್ಥಾನದಲ್ಲಿದೆ. ಒಟ್ಟು 5,28,859 ಪ್ರಕರಣಗಳು ಭಾರತದಲ್ಲಿ ದಾಖಲಾಗಿದ್ದು, ದೇಶ 4ನೇ ಸ್ಥಾನದಲ್ಲಿದೆ. ಇದುವರೆಗೂ ಮೃತಪಟ್ಟವರ ಸಂಖ್ಯೆ 16,095.

ದೇಶದಲ್ಲಿಯೇ ಅತಿ ಹೆಚ್ಚು ಸೋಂಕಿನ ಪ್ರಕರಣ ಮಹಾರಾಷ್ಟ್ರದಲ್ಲಿ ದಾಖಲಾಗಿದೆ. ಸತತ ಎರಡು ದಿನಗಳಿಂದ ರಾಜ್ಯದಲ್ಲಿ 5000 ಹೊಸ ಪ್ರಕರಣಗಳು ವರದಿಯಾಗುತ್ತಿವೆ. ಮಹಾರಾಷ್ಟ್ರ ಹೊರತುಪಡಿಸಿದರೆ ದೆಹಲಿಯಲ್ಲಿ ಅತಿ ಹೆಚ್ಚು ಸೋಂಕು ಪತ್ತೆಯಾಗಿದೆ.

ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಒಂದೇ ದಿನ 596 ಹೊಸ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 11,923ಕ್ಕೆ ಏರಿಕೆಯಾಗಿದೆ. ಜುಲೈ 5ರಿಂದ ಪ್ರತಿ ಭಾನುವಾರ ಸಂಪೂರ್ಣ ಲಾಕ್ ಡೌನ್ ಮಾಡುವುದಾಗಿ ಸರ್ಕಾರ ಘೋಷಣೆ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+