Breaking: ಭಾರತದಲ್ಲಿ ಕೊರೊನಾದಿಂದ 30 ನಿಮಿಷಕ್ಕೆ ಒಬ್ಬರು ಸಾವು!
ನವದೆಹಲಿ, ಮೇ 23: ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರಿದಿದೆ. ದೇಶದಲ್ಲಿ ಕೋವಿಡ್-19 ಸೋಂಕಿನಿಂದ ಪ್ರತಿ ಅರ್ಧಗಂಟೆಗೊಬ್ಬರು ಪ್ರಾಣ ಬಿಟ್ಟಿದ್ದಾರೆ.
ಕಳೆದ 24 ಗಂಟೆಗಳಲ್ಲಿ 2,022 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪಕ್ಕಾ ಆಗಿದೆ. ಕಳೆದೊಂದು ದಿನದಲ್ಲಿ ಕೊರೊನಾ ವೈರಸ್ ಮಹಾಮಾರಿಯಿಂದ 46 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದೇ ಅವಧಿಯಲ್ಲಿ 2,099 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 43,138,393ಕ್ಕೆ ಏರಿಕೆಯಾಗಿದೆ. ಇದರ ಮಧ್ಯೆ ಇದುವರೆಗೂ 42,599,102 ಸೋಂಕಿತರು ಗುಣಮುಖರಾಗಿದ್ದು, ಗುಣಮುಖ ಶೇಕಡಾವಾರು ಪ್ರಮಾಣ ಶೇ.98.75ರಷ್ಟಿದೆ. ಅದೇ ರೀತಿ ಮಹಾಮಾರಿ ಕೋವಿಡ್-19 ಸೋಂಕಿಗೆ ದೇಶದಲ್ಲಿ ಇದುವರೆಗೂ 5,24,459 ಮಂದಿ ಪ್ರಾಣ ಬಿಟ್ಟಿದ್ದು, ಮೃತರ ಪ್ರಮಾಣ ಶೇ.1.22ರಷ್ಟಿದೆ. ದೇಶದಲ್ಲಿ ಒಟ್ಟು ಕೊರೊನಾವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 14,832 ಆಗಿದೆ. ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.0.03ರಷ್ಟಿದೆ.

ಕೊರೊನಾ ವೈರಸ್ ಲಸಿಕೆ ವಿತರಣೆ ಪ್ರಮಾಣ; ಕೋವಿಡ್-19 ಲಸಿಕೆ ವಿತರಣೆಗೆ ವೇಗ ತಗ್ಗಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲೇ 8,81,668 ಮಂದಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದ್ದು, ಈವರೆಗೂ 1,92,38,45,615 ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.












Click it and Unblock the Notifications