ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಚ್ಚರ: ಭಾರೀ ಇಳಿಕೆ ಕಂಡಿದ್ದ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ

|
Google Oneindia Kannada News

ನವದೆಹಲಿ, ಮೇ 26: ಭಾರತದಲ್ಲಿ ಕಳೆದ ಒಂದು ವಾರದಿಂದ ಸತತವಾಗಿ ಇಳಿಕೆ ಕಂಡಿದ್ದ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ. ಮಂಗಳವಾರದ ವರದಿಯಲ್ಲಿ 2 ಲಕ್ಷಕ್ಕಿಂತ ಕಡಿಮೆ ಪ್ರಕರಣಗಳು ಕಂಡುಬಂದಿದ್ದವು.

ಆದರೆ, ಬುಧವಾರದ ಆರೋಗ್ಯ ಸಚಿವಾಲಯದ ವರದಿಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 2,08,921 ಹೊಸ ಕೋವಿಡ್-19 ಪ್ರಕರಣ ಪತ್ತೆಯಾಗಿವೆ. ಇದೇ ವೇಳೆ ಸಾವಿನ ಸಂಖ್ಯೆಯಲ್ಲಿಯೂ ಏರಿಕೆ ಕಂಡುಬಂದಿದ್ದು, 4,157 ಸೋಂಕಿತರು ಮೃತಪಟ್ಟಿದ್ದಾರೆ.

ಇನ್ನು ಮಂಗಳವಾರದಂದು ಒಂದೇ ದಿನ 2,95,955 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು, ಹಿಂದಿನ ಅಂಕಿ-ಅಂಶ ಗಮನಿಸಿದರೆ ಚೇತರಿಕೆ ಪ್ರಮಾಣವೂ ಕೊಂಚ ಇಳಿಕೆಯಾಗಿದೆ.

2,08,921 New Covid-19 Positive Cases Reported In Last 24 Hours In India

ಹಾಗೆಯೇ ದೇಶದಲ್ಲಿ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 2,71,57,795ಕ್ಕೆ ಏರಿಕೆಯಾಗಿದ್ದು, ಇದುವರೆಗೆ ದೇಶದಲ್ಲಿ 2,43,50,816 ಸೋಂಕಿತರು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹೊಸ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಇಳಿಕೆ ಕಂಡುಬಂದ ನಂತರ ಮತ್ತೆ ಏರಿಕೆಯಾಗುತ್ತಿರುವುದು ಜನರಲ್ಲಿ ಆತಂಕ ಮನೆಮಾಡುವಂತೆ ಮಾಡಿದೆ.

ಇಲ್ಲಿಯವರೆಗೆ ದೇಶದಲ್ಲಿ 3,11,388 ಸೋಂಕಿತರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ ಹಾಗೂ ಇನ್ನೂ 24,95,591 ಸಕ್ರಿಯ ಕೊರೊನಾ ಪ್ರಕರಣಗಳಿವೆ. ಹಾಗೆಯೇ ಇದುವರೆಗೆ 20,06,62,456 ಜನರಿಗೆ ಕೊರೊನಾ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

Recommended Video

ಕೊರೊನ ಗೆದ್ದ ಸೌತ್ ಕೊರಿಯ | Oneindia Kannada

2021 ಮೇ 25 ರವರೆಗೆ ಭಾರತದಲ್ಲಿ ಕೋವಿಡ್-19ಗಾಗಿ 33,48,11,496 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ 22,17,320 ಮಾದರಿಗಳನ್ನು ಮಂಗಳವಾರ ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.

English summary
In the last 24 hours, 2,08,921 new Covid-19 cases have been reported in India. The total number of infections increased to 2,71,57,795.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X