ಅಸ್ಸಾಂನಲ್ಲಿ ಬಾಲ್ಯ ವಿವಾಹ ಸಂಬಂಧ 2,170 ಜನರ ಬಂಧನ
ಬಾಲ್ಯವಿವಾಹ ಪ್ರಕರಣಗಳಲ್ಲಿ ಬಂಧಿತರ ಸಂಖ್ಯೆ ಹೆಚ್ಚುತ್ತಿದೆ. ಶನಿವಾರ ಬೆಳಗಿನ ತನಕ ಪೊಲೀಸರು ರಾಜ್ಯಾದ್ಯಂತ 2,170 ಜನರನ್ನು ಬಂಧಿಸಿದ್ದು, ಇದು ಮತ್ತಷ್ಟು ಹೆಚ್ಚಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುವಾಹಟಿ, ಫೆಬ್ರವರಿ 4: ಅಸ್ಸಾಂ ರಾಜ್ಯದಲ್ಲಿ ಇದುವರೆಗೆ ಬಾಲ್ಯ ವಿವಾಹ ಪ್ರಕರಣಗಳಲ್ಲಿ ಭಾಗಿಯಾಗಿರುವ 2,170 ಜನರನ್ನು ಬಂಧಿಸಲಾಗಿದೆ ಎಂದು ಅಲ್ಲಿನ ಪೊಲೀಸರು ಮಾಹಿತಿ ನೀಡಿದ್ದಾರೆ.
ಬಾಲ್ಯವಿವಾಹ ಪ್ರಕರಣಗಳಲ್ಲಿ ಬಂಧಿತರ ಸಂಖ್ಯೆ ಹೆಚ್ಚುತ್ತಿದೆ. ಶನಿವಾರ ಬೆಳಗಿನ ತನಕ ಪೊಲೀಸರು ರಾಜ್ಯಾದ್ಯಂತ 2,170 ಜನರನ್ನು ಬಂಧಿಸಿದ್ದು, ಇದು ಮತ್ತಷ್ಟು ಹೆಚ್ಚಾಗಲಿದೆ ಎಂದು ಪೊಲೀಸ್ ಮಹಾನಿರೀಕ್ಷಕ (ಕಾನೂನು ಮತ್ತು ಸುವ್ಯವಸ್ಥೆ) (ಐಜಿಪಿ ಎಲ್&ಒ) ಭುಯಾನ್ ತಿಳಿಸಿದ್ದಾರೆ.
ಶುಕ್ರವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಸ್ಸಾಂ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಜಿಪಿ ಸಿಂಗ್, ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ 4,074 ಪ್ರಕರಣಗಳು ದಾಖಲಾಗಿವೆ. ಬಂಧಿತರಲ್ಲಿ 52 ಮಂದಿ ಪುರೋಹಿತರು ಮತ್ತು ಖಾಜಿಗಳು ಬಾಲ್ಯವಿವಾಹದಲ್ಲಿ ಭಾಗಿಯಾಗಿದ್ದಾರೆ. ಧುಬ್ರಿ, ಬಾರ್ಪೇಟಾ, ಕೊಕ್ರಜಾರ್ ಮತ್ತು ವಿಶ್ವನಾಥ್ ಜಿಲ್ಲೆಗಳಿಂದ ಗರಿಷ್ಠ ಸಂಖ್ಯೆಯ ಜನರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ರಾಜ್ಯದಲ್ಲಿ ಬಾಲ್ಯವಿವಾಹ ಪ್ರಕರಣಗಳು ಮಿತಿಮೀರಿದೆ ಎಂಬ ಮಾಹಿತಿ ಸಿಕ್ಕಿದ್ದರಿಂದ ತನಿಖೆ ನಡೆಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ ಎಂದು ಡಿಜಿಪಿ ಸಿಂಗ್ ತಿಳಿಸಿದ್ದಾರೆ. ಸುಮಾರು ಎರಡು ತಿಂಗಳ ಹಿಂದೆ ಸಿಎಂ ಶರ್ಮಾ ಅವರು ರಾಜ್ಯದ ವಿವಿಧ ಭಾಗಗಳಲ್ಲಿ ಬಾಲ್ಯವಿವಾಹ ವ್ಯಾಪಕವಾಗಿ ನಡೆಯುತ್ತಿದೆ ಎಂದು ಮಾಹಿತಿ ಸಿಕ್ಕಿದೆ ಎಂದು ಪೊಲೀಸರಿಗೆ ತಿಳಿಸಿದ್ದರು.
ಬಾಲ್ಯವಿವಾಹ ಸಂಬಂಧ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚಿಸಿದ್ದರು. ಸಿಎಂ ನಿರ್ದೇಶನದ ನಂತರ ಎಲ್ಲಾ ಜಿಲ್ಲಾ ಎಸ್ಪಿಗಳಿಗೆ ಆಯಾ ಗ್ರಾಮ ರಕ್ಷಣಾ ಪಕ್ಷಗಳು, ಗಾಂವ್ ಬುರಾಗಳು, ವಿವಿಧ ಸಮುದಾಯಗಳ ಮುಖಂಡರು ಮತ್ತು ವಿವಿಧ ಸಮುದಾಯಗಳ ಪ್ರಮುಖರೊಂದಿಗೆ ಸಂಪರ್ಕದಲ್ಲಿರಲು ತಿಳಿಸಲಾಯಿತು. ಅದರ ಆಧಾರದ ಮೇಲೆ ನಾವು ರಾಜ್ಯದ ವಿವಿಧ ಭಾಗಗಳಲ್ಲಿ ಬಾಲ್ಯವಿವಾಹವಾಗಿದೆ ಹೆಚ್ಚಾಗಿದೆ ಎಂದು ತಿಳಿಸಿದರು.

ಹೆಚ್ಚಿನ ಪ್ರಕರಣಗಳನ್ನು ಪೋಕ್ಸೊ ಕಾಯ್ದೆ ಮತ್ತು ಐಪಿಸಿ ಸೆಕ್ಷನ್‌ಗಳಡಿಯಲ್ಲಿ ದಾಖಲಿಸಲಾಗಿದ್ದು, ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಡಿಜಿಪಿ ತಿಳಿಸಿದ್ದಾರೆ. ಏತನ್ಮಧ್ಯೆ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ರಾಜ್ಯದಲ್ಲಿ ಬಾಲ್ಯವಿವಾಹಗಳ ವಿರುದ್ಧ ಮುಂದಿನ ದಿನಗಳಲ್ಲಿ ಶಿಸ್ತುಕ್ರಮವನ್ನು ಮುಂದುವರೆಸುವುದಾಗಿ ತಿಳಿಸಿದ್ದಾರೆ.












Click it and Unblock the Notifications