ಭಾರತದಲ್ಲಿ 3 ಲಕ್ಷ ದಾಟಿದ ಕೋವಿಡ್ ಸಾವಿನ ಸಂಖ್ಯೆ

ನವದೆಹಲಿ, ಮೇ 24: ಭಾರತ ದೇಶದಲ್ಲಿ ಕೋವಿಡ್ ಸೋಂಕಿತರ ಸಾವಿನ ಸಂಖ್ಯೆ 3 ಲಕ್ಷ ಗಡಿ ದಾಟಿದೆ. ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಭಾನುವಾರ ಒಂದೇ ದಿನ 4,454 ಸೋಂಕಿತರು ಸಾವನ್ನಪ್ಪಿದ್ದಾರೆ.

ಈ ಮೂಲಕ ಕೋವಿಡ್ ಸೋಂಕಿತರ ಸಾವಿನ ಸಂಖ್ಯೆ 3 ಲಕ್ಷಕ್ಕೂ ಅಧಿಕವಾಗಿದ್ದು, ಒಟ್ಟು ಸೋಂಕಿತರ ಸಾವಿನ ಸಂಖ್ಯೆ 3,03,720ಕ್ಕೆ ಏರಿಕೆಯಾಗಿದೆ. ಆದರೆ ದೈನಂದಿನ ಸಾವಿನ ಸಂಖ್ಯೆಯಲ್ಲಿ ಸ್ಥಿರತೆ ಕಾಯ್ದುಕೊಂಡಿದ್ದು, ಇಇಕೆಯಾಗುವ ಯಾವ ಲಕ್ಷಣಗಳು ಗೋಚರಿಸುತ್ತಿಲ್ಲ.

ಭಾರತದಲ್ಲಿ ಕೊರೊನಾ ಸೋಂಕಿತರ ದೈನಂದಿನ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 2,22,315 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,67,52,447ಕ್ಕೆ ಏರಿಕೆಯಾಗಿದೆ.

2,22,315 New Covid-19 Positive Cases Reported In Last 24 Hours In India

ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ, ಭಾನುವಾರ ಒಂದೇ ದಿನ 3,02,544 ಕೊರೊನಾ ಸೋಂಕಿತ ಪ್ರಕರಣಗಳು ಚೇತರಿಕೆ ಕಂಡಿವೆ. ಆ ಮೂಲಕ ಒಟ್ಟು 2,37,28,011 ಸೋಂಕಿತ ಪ್ರಕರಣಗಳು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಇದೇ ವೇಳೆ ಭಾರತ ದೇಶದಲ್ಲಿ ಈವರೆಗೆ ಒಟ್ಟು 19,60,51,962 ಜನರಿಗೆ ವ್ಯಾಕ್ಸಿನೇಷನ್ ಮಾಡಲಾಗಿದೆ. ದೇಶದಲ್ಲಿ ಕೊರೊನಾ ಲಸಿಕೆ ಕೊರತೆಯ ಹೊರತಾಗಿಯೂ 20 ಕೋಟಿ ಸನಿಹ ಜನರಿಗೆ ಲಸಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+