ಭಾರತದಲ್ಲಿ ಎರಡೂವರೆ ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರು
ನವದೆಹಲಿ, ಏಪ್ರಿಲ್ 18: ಭಾರತದಲ್ಲಿ ಕೊರೊನಾ ಸೋಂಕಿತರು ಎರಡು ಲಕ್ಷ ಗಡಿ ದಾಟಿದ್ದಾರೆ.
ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 2,61,500 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಹಾಗೆಯೇ 1501 ಮಂದಿ ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ 15,66,394 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಮೂಲಕ ಒಟ್ಟಾರೆ ಕೋವಿಡ್ ಪರೀಕ್ಷೆಗಳ ಸಂಖ್ಯೆ 26,65,38,416ಕ್ಕೆ ಏರಿಕೆಯಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಅಂತೆಯೇ ಈ ವರೆಗೂ 12,26,22,590 ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ನಿನ್ನೆಯಷ್ಟೇ ದೇಶಾದ್ಯಂತ 2,34,692 ಕೇಸ್ ಗಳು ಪತ್ತೆಯಾಗಿತ್ತು. ಇದು ಈ ವರೆಗಿನ ಸಾರ್ವಕಾಲಿಕ ದಾಖಲೆಯಾಗಿತ್ತು. ಆದರೆ ಇಂದು ಈ ದಾಖಲೆಯನ್ನೂ ಮೀರಿಸುವಂತೆ 2.61ಲಕ್ಷ ಮಂದಿಗೆ ಸೋಂಕು ಒಕ್ಕರಿಸಿದೆ. ಆ ಮೂಲಕ ಸತತ 4ನೇ ದಿನವೂ 2 ಲಕ್ಷಕ್ಕಿಂತಲೂ ಹೆಚ್ಚು ಹೊಸ ಪ್ರಕರಣಗಳು ಪತ್ತೆಯಾಗಿವೆ.
ಇದುವರೆಗೆ 1,77,150 ಮಂದಿ ಕೊರೊನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ, ಒಟ್ಟು 1,47,88,109 ಪ್ರಕರಣಗಳಿವೆ. 18,01,316 ಸಕ್ರಿಯ ಪ್ರಕರಣಗಳಿವೆ, ಇದುವರೆಗೂ 1,28,09,643 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಕಳೆದ 24 ಗಂಟೆಯಲ್ಲಿ 1,38,423 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದಬ ಮಾಹಿತಿ ಲಭ್ಯವಾಗಿದೆ. ಇದುವರೆಗೂ ದೇಶದಲ್ಲಿ 12,26,22,590 ಮಂದಿಗೆ ಕೊರೊನಾ ಲಸಿಕೆ ವಿತರಿಸಲಾಗಿದೆ.












Click it and Unblock the Notifications