Breaking: ಭಾರತದಲ್ಲಿ ಒಂದೇ ದಿನ 2858 ಮಂದಿಗೆ ಕೋವಿಡ್-19 ಪಾಸಿಟಿವ್!
ನವದೆಹಲಿ, ಮೇ 14: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲಿ 2858 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪಕ್ಕಾ ಆಗಿದೆ.
ದೇಶದಲ್ಲಿ ಒಂದು ದಿನದಲ್ಲಿ ಕೊರೊನಾವೈರಸ್ ಮಹಾಮಾರಿಯಿಂದ 11 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದೇ ಅವಧಿಯಲ್ಲಿ 3,355 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಭಾರತದಲ್ಲಿ ಇದುವರೆಗೂ 4,25,76,815 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರ ಶೇಕಡಾವಾರು ಪ್ರಮಾಣ ಶೇ.98.74ರಷ್ಟಿದೆ. ಅದೇ ರೀತಿ ಮಹಾಮಾರಿ ಕೋವಿಡ್-19 ಸೋಂಕಿಗೆ ದೇಶದಲ್ಲಿ ಇದುವರೆಗೂ 5,24,201 ಮಂದಿ ಪ್ರಾಣ ಬಿಟ್ಟಿದ್ದು, ಮೃತರ ಪ್ರಮಾಣ ಶೇ.1.22ರಷ್ಟಿದೆ. ದೇಶದಲ್ಲಿ ಒಟ್ಟು ಕೊರೊನಾವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 18,096 ಆಗಿದೆ. ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.0.04ರಷ್ಟಿದೆ.
ಕೊರೊನಾವೈರಸ್ ಲಸಿಕೆ ವಿತರಣೆ ಪ್ರಮಾಣ:
ಕೋವಿಡ್-19 ಲಸಿಕೆ ವಿತರಣೆಗೆ ವೇಗ ನೀಡಲಾಗುತ್ತಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲೇ 15,04,734 ಮಂದಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದ್ದು, ಈವರೆಗೂ 1,91,15,90,370 ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.