ಗ್ರೇಟರ್ ನೋಯ್ಡಾ ಅತ್ಯಾಚಾರ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
ದೆಹಲಿ, ಏಪ್ರಿಲ್ 24: ರಾಜಧಾನಿ ದೆಹಲಿ ಬಳಿಯ ಗ್ರೇಟರ್ ನೋಯ್ಡಾ ಬಳಿ ಕಾರಿನಲ್ಲಿ ಅಪ್ರಾಪ್ತೆಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಏಪ್ರಿಲ್ 18ರಂದು ಕಾಲೇಜಿಗೆ ತೆರಳಿದ್ದ 11 ನೇ ತರಗತಿಯ ಯುವತಿಯನ್ನು ಅಪಹರಿಸಿ, ಕಾರಿನಲ್ಲಿ ಅತ್ಯಾಚಾರ ಎಸಗಲಾಗಿತ್ತು. ನಂತರ ಆಕೆಯನ್ನು ಕಾಲೇಜ್ ಬಳಿ ಬಿಟ್ಟು ಹೋಗಲಾಗಿತ್ತು. ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಆಕೆಯನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ವೈದ್ಯಕೀಯ ಪರೀಕ್ಷೆಯ ನಂತರ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ಸಾಬೀತಾಗಿತ್ತು.

ಘಟನೆಗೆ ಸಂಬಂಧಿಸಿದಂತೆ ದೂರು ನೀಡಿದ್ದ ಯುವತಿಯ ತಂದೆಯ ಹೇಳಿಕೆಯ ಮೇರೆಗೆ ಮೂವರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿತ್ತು. ಇದೀಗ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ.












Click it and Unblock the Notifications