Bharat Jodo: ಜಮ್ಮುವಿನಲ್ಲಿ ಹೈ ಅಲರ್ಟ್ ನಡುವೆ ಕಾರು ಸ್ಟೋಟದಿಂದ 6 ಮಂದಿ ಗಾಯ
ಶ್ರೀನಗರ, ಜನವರಿ21: ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಹಿನ್ನೆಲೆ ಹೈ ಅಲರ್ಟ್ ನಡುವೆ ಶನಿವಾರ ಜಮ್ಮು ನಗರದ ಹೊರವಲಯದಲ್ಲಿರುವ ನರ್ವಾಲ್ ಪ್ರದೇಶದಲ್ಲಿ ಅವಳಿ ಸ್ಫೋಟದಿಂದ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯ ದೃಷ್ಟಿಯಿಂದ ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಇನ್ನೂ ಜಮ್ಮು ರೈಲು ನಿಲ್ದಾಣದ ಬಳಿ ಅವಳಿ ಕಾರು ಸ್ಫೋಟದಲ್ಲಿ ಆರು ಜನರು ಗಾಯಗೊಂಡಿದ್ದು, ಜಮ್ಮುವಿನ ನರ್ವಾಲ್ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ಹೇಳಿದ್ದಾರೆ.
ಸ್ಫೋಟಕ್ಕಾಗಿ ಕಾರುಗಳಲ್ಲಿ ಸುಧಾರಿತ ಸ್ಫೋಟಕ ಸಾಧನಗಳನ್ನು (ಐಇಡಿ) ಅಳವಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇತ್ತ ಸ್ಪೋಟದಿಂದ ಗಾಯಗೊಂಡ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನೂ ಅವಳಿ ಸ್ಪೋಟದ ನಂತರ ಪ್ರದೇಶವನ್ನು ಸುತ್ತುವರಿಯಲಾಗಿದ್ದು, ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಜೊತೆಗೆ ವಾಹನಗಳನ್ನ ತಡೆದು ತಪಾಸಣೆ ನಡೆಸಲಾಗುತ್ತಿದೆ.












Click it and Unblock the Notifications