ಗೋವಾ: ಬಿಜೆಪಿ ಸೇರಲಿರುವ ಕಾಂಗ್ರೆಸ್ ನ ಇಬ್ಬರು ಶಾಸಕರು

ನವದೆಹಲಿ, ಅಕ್ಟೋಬರ್ 16: ಗೋವಾ ಕಾಂಗ್ರೆಸ್ ನ ಇಬ್ಬರು ಶಾಸಕರು ಬಿಜೆಪಿ ಸೇರುವ ತಮ್ಮ ನಿರ್ಧಾರವನ್ನು ಮಂಗಳವಾರ ಹೊರಹಾಕಿದ್ದಾರೆ.

ಮೈಸೂರು ದಸರಾ - ವಿಶೇಷ ಪುರವಣಿ

ಸೋಮವಾರದಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿಯಾಗಿದ್ದ ಶಾಸಕರಾದ ದಯಾನಂದ್ ಸಾಪ್ಟೆ ಮತ್ತು ಸುಭಾಶ್ ಶಿರೋಡ್ಕರ್ ಎಂಬ ಇಬ್ಬರು ಕಾಂಗ್ರೆಸ್ ಶಾಸಕರು, ತಮ್ಮ ಅಂತಿಮ ನಿರ್ಧಾರವನ್ನು ಮಂಗಳವಾರ ಪ್ರಕಟಿಸಿದರು.

ಈಗಾಗಲೇ ತಮ್ಮ ರಾಜೀನಾಮೆ ಪತ್ರವನ್ನು ಸ್ಪೀಕರ್ ಪ್ರಮೋದ್ ಸಾವಂತ್ ಅವರಿಗೆ ಶಾಸಕರು ನೀಡಿದ್ದಾರೆ. ಸ್ಪೀಕರ್ ಸಹ ಈ ರಾಜೀನಾಮೆಗಳನ್ನು ಅಂಗೀಕರಿಸಿದ್ದು, ಇಬ್ಬರು ಶಾಸಕರೂ ಬಿಜೆಪಿ ಸೇರುವುದು ಖಚಿತವಾಗಿದೆ.

ದಯಾನಂದ ಸೊಪ್ಟೆ ಯಾರು?

ದಯಾನಂದ ಸೊಪ್ಟೆ ಯಾರು?

ದಯಾನಂದ ಸೊಪ್ಟೆ ಗೋವಾ ಕಾಂಗ್ರೆಸ್ಸಿನ ಪ್ರಮುಖ ನಾಯಕರಲ್ಲಿ ಒಬ್ಬರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಆಗಿನ ಮುಖ್ಯಮಂತ್ರಿ ಲಕ್ಷ್ಮಿಕಾಂತ್ ಪರ್ಸೇಕರ್ ಅವರನ್ನು ದಯಾನಂದ್ ಸೋಲಿಸಿದ್ದರು. ಗೋವಾದ ಮಂಡ್ರೆಮ್ ಕ್ಷೇತ್ರವನ್ನು ಇವರು ಪ್ರತಿನಿಧಿಸುತ್ತಿದ್ದರು.

ಸುಭಾಶ್ ಶಿರೋಡ್ಕರ್

ಸುಭಾಶ್ ಶಿರೋಡ್ಕರ್

ಗೋವಾದ ಶಿರೋಡಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಸುಭಾಶ್ ಸಹ ಕಾಂಗ್ರೆಸ್ ನ ನಿಷ್ಠಾವಂತ ಕಾರ್ಯಕರ್ತರಾಗಿದ್ದವರು. ಬಿಜೆಪಿಗೆ ಸೇರಿದ ಅವರು, 'ತಾವು ಅಮಿತ್ ಶಾ ಅವರನ್ನು ಭೇಟಿಯಾದ ನಂತರ ಈ ನಿರ್ಧಾರಕ್ಕೆ ಬಂದಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಜನ ಬಿಜೆಪಿಗೆ ಸೇರುವ ಸಾಧ್ಯತೆ ಇದೆ' ಎಂದರ.'

ಬಿಜೆಪಿಯತ್ತ ಕಾಂಗ್ರೆಸ್ ಶಾಸಕರು

ಕಾಂಗ್ರೆಸ್ಸಿನ ಇನ್ನೂ ಕೆಲವು ಶಾಸಕರು ಸದ್ಯದಲ್ಲೇ ಬಿಜೆಪಿ ಸೇರಲಿದ್ದಾರೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ. ಈ ಮೂಲಕ ಭವಿಷ್ಯದಲ್ಲಿ ಎಂಥದೇ ಸನ್ನಿವೇಶ ಬಂದರೂ ಕಾಂಗ್ರೆಸ್ಸಿಗೆ ಸರ್ಕಾರ ರಚಿಸಲು ಸಾಧ್ಯವಾಗದಂತೆ ಮಾಡುವುದು ಬಿಜೆಪಿಯ ಆಲೋಚನೆಯಾಗಿದೆ.

ವಿಧಾನಸಭೆಯ ಬಲಾಬಲ

ಗೋವಾದ 40 ಕ್ಷೇತ್ರಗಳಲ್ಲಿ ಕಾಂಗ್ರೆಸ್ 17(ಈಗ 15) ಕ್ಷೇತ್ರಗಳಲ್ಲಿ ಜಯಗಳಿಸಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ 13 ಸ್ಥಾನ ಗೆದ್ದಿದ್ದ ಬಿಜೆಪಿ ಇತರ ಪಕ್ಷಗಳೊಂದಿಗೆ ಸೇರಿ ಸರ್ಕಾರ ರಚಿಸಿತ್ತು. ಅಗತ್ಯವಿರುವ ಮ್ಯಾಜಿಕ್ ನಂಬರ್ 21 ಅನ್ನು ತಲುಪಲು ಕಾಂಗ್ರೆಸ್ ಗೆ ಸಾಧ್ಯವಾಗದ ಕಾರಣ ಅದು ಸರ್ಕಾರ ರಚಿಸಲು ಸಾಧ್ಯವಾಗದೆ ಹಿಂದೆ ಉಳಿದುಕೊಂಡಿತ್ತು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+