ಹಂದ್ವಾರದಲ್ಲಿ ಇಬ್ಬರು ಹಿಜ್ಬುಲ್ ಉಗ್ರರ ಬಂಧನ
ಶ್ರೀನಗರ, ಜೂನ್ 12 : ದಕ್ಷಿಣ ಕಾಶ್ಮೀರದಲ್ಲಿ ಸೋಮವಾರ ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಬಂಧಿಸಿದೆ.
ದಕ್ಷಿಣ ಕಾಶ್ಮೀರದ ಹಂದ್ವಾರದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿ ಪಡೆದ ಸೇನಾ ಪಡೆಗಳು ದಿಢೀರ್ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಉಗ್ರಗಾಮಿಗಳನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ.

ದಾಳಿ ವೇಳೆ ಉಗ್ರರು ಅಡಗಿದ್ದ ಪ್ರದೇಶದಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಕಂಡುಬಂದಿದ್ದು, ಪೊಲೀಸರು ಅವುಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಸಧ್ಯ ಉಗ್ರರನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ಯಲಾಗಿದ್ದು, ವ್ಯಾಪಕ ತನಿಖೆ ನಡೆಸಲಾಗುತ್ತಿದೆ.
J&K: 2 terrorists arrested after a joint team of Police & Army busted an active Hizb-ul-Mujahideen module, in north Kashmir's Handwara pic.twitter.com/8QNB3RBqJc
— ANI (@ANI_news) June 12, 2017












Click it and Unblock the Notifications