• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಪಾಕಿಸ್ತಾನದಲ್ಲಿ ಕಣ್ಮರೆಯಾದ ಭಾರತೀಯ ಇಬ್ಬರು ರಾಜತಾಂತ್ರಿಕರು

|

ನವದೆಹಲಿ, ಜೂನ್ 15: ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಇಬ್ಬರು ಅಧಿಕಾರಿಗಳು ಕಣ್ಮರೆಯಾಗಿದ್ದಾರೆ.

ನಿನ್ನೆಯಿಂದ ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಂಬಂಧ ಸರಿ ಇಲ್ಲ. ಇದೀಗ ಭಾರತೀಯ ರಾಯಭಾರಿ ಕಚೇರಿಯ ಇಬ್ಬರು ಅಧಿಕಾರಿಗಳು ನಾಪತ್ತೆಯಾಗಿರುವುದು ಇಸ್ಲಾಮಾಬಾದಿನಲ್ಲಿ ಆತಂಕದ ಸ್ಥಿತಿಯನ್ನು ನಿರ್ಮಾಣ ಮಾಡಿದೆ.

ವಿಡಿಯೋ: ಭಾರತ-ಪಾಕಿಸ್ತಾನ ಗಡಿಯಲ್ಲಿ ಮೊಳಗಿದ ಗುಂಡಿನ ಸದ್ದು!

ರಾಯಭಾರಿ ಕಚೇರಿಯು ಈ ಇಬ್ಬರು ಅಧಿಕಾರಿಗಳನ್ನು ಹುಡುಕಲು ಸಾಹಸ ಪಡುತ್ತಿದೆ. ಪಾಕಿಸ್ತಾನವು ಭಾರತೀಯ ಅಧಿಕಾರಿಗಳ ಮೇಲೆ ಕಣ್ಗಾವಲಿರಿಸಿದ್ದು, ಕಾರ್ಯವನ್ನು ಪುನರಾರಂಭಿಸುವುದು ಕಷ್ಟವಾಗಿದೆ. ಭಾರತವು ಟಿಪ್ಪಣಿ ರೂಪದಲ್ಲಿ ಪ್ರತಿಭಟನೆ ನಡೆಸಿದೆ.

ಪಾಕಿಸ್ತಾನದಲ್ಲಿ ಭಾರತೀಯ ರಾಯಭಾರಿ ಕಚೇರಿಯ ಸಿಬ್ಬಂದಿ ನಾಪತ್ತೆಯಾಗುತ್ತಿದ್ದಂತೆ, ಭಾರತವು ತನ್ನ ಅಧಿಕಾರಿಗಳಿಗೆ ಹಿಂಸೆ ನೀಡಿದೆ ಎಂದು ಪಾಕಿಸ್ತಾನದ ಅಧಿಕಾರಿಗಳು ಹೇಳಿಕೆ ಕೊಟ್ಟಿದ್ದಾರೆ.

ಪಾಕಿಸ್ತಾನವು ಭಾರತದ ಮೇಲಿರುವ ಕೋಪವನ್ನು ಭಾರತೀಯ ಅಧಿಕಾರಿಗಳಿಗೆ ಹಿಂಸೆ ನೀಡುವ ಮೂಲಕ ತೀರಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲಿರುವ ಇಬ್ಬರು ಅಧಿಕಾರಿಗಳಿಗೆ ಭಾರತಕ್ಕೆ ವಾಪಸ್ ಬರುವಂತೆ ಸೂಚನೆ ನೀಡಲಾಗಿದೆ.

English summary
Two officials working with the Indian High Commission in Pakistan capital Islamabad have gone missing. Reports suggest that the two officials have been missing for the last two hours. One CISF driver posted at the High Commission along with one other official of the high commission has been missing.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X