ಮಹಾರಾಷ್ಟ್ರ ಕಾರ್ಖಾನೆಯಲ್ಲಿ ಬೆಂಕಿ: ಇಬ್ಬರು ಕಾರ್ಮಿಕರು ಸಾವು

Posted By:
Subscribe to Oneindia Kannada

ಪುಣೆ, ಮಾರ್ಚ್ 14: ಮಹಾರಾಷ್ಟ್ರದ ಪುಣೆಯಲ್ಲಿ ಇಂದು(ಮಾ.14) ಬೆಳಗ್ಗಿನ ಜಾವ ಕಾರ್ಖಾನೆಯೊಂದರಲ್ಲಿ ಹೊತ್ತಿಕೊಂಡ ಬೆಂಕಿಯಿಂದಾಗಿ ಇಬ್ಬರು ಮೃತರಾಗಿದ್ದಾರೆ.

ಪುಣೆಯ ಶಿವಾಜೀನಗರದಲ್ಲಿನ ಕಾರ್ಖಾನೆಯೊಂದರಲ್ಲಿ ಬೆಳಗ್ಗಿನ ಜಾವ ಸುಮಾರು 3 ಗಂಟೆಗೆ ಬೆಂಕಿ ಹೊತ್ತಿಕೊಂಡಿದ್ದು, ಈ ಕಾರ್ಖಾನೆಯಲ್ಲಿ ಕಾರ್ಪೆಂಟರ್ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರು ಪ್ರಾಣಕಳೆದುಕೊಂಡಿದ್ದಾರೆ.

ಮಹಾರಾಷ್ಟ್ರದ ಕಾರ್ಖಾನೆಯಲ್ಲಿ ಬೆಂಕಿ ಅವಘಡ: 3 ಸಾವು

ಕಾರ್ಖಾನೆಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದ್ದೇಕೆ ಎಂಬ ಕುರಿತು ಮಾಹಿತಿ ಲಭ್ಯವಾಗಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ಆರಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

2 killed in Pune factory blaze

ಮಾ.9 ರಂದಷ್ಟೇ ಇಲ್ಲಿನ ಪಲ್ಘರ್ ಜಿಲ್ಲೆಯ ತಾರಾಪುರ ಎಂಬಲ್ಲಿಯೂ ಕಾರ್ಖಾನೆಗೆ ಬೆಂಕಿ ತಗುಲಿ ಮೂವರು ಮೃತರಾಗಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Two persons were killed in a massive fire that broke out in a factory in Maharashtra's Pune in the wee hours of Wednesday.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ