ಐ.ಟಿ ಉದ್ಯೋಗಿಗಳಿಗೆ ಶಾಕ್ ನೀಡಿದ ಹೆಡ್ ಹಂಟರ್ಸ್ ಸಂಸ್ಥೆ
ಹೆಡ್ ಹಂಟರ್ಸ್ ಇಂಡಿಯಾ ಸಂಸ್ಥೆಯಿಂದ ಐ.ಟಿ ಉದ್ಯೋಗಿಗಳಿಗೆ ಮುಂದಿನ ಮೂರು ವರ್ಷಗಳಲ್ಲಿ ಗಂಡಾಂತರವೊಂದು ಕಾದಿದೆ. ಹಾಗೂ 35ವರ್ಷಕ್ಕಿಂತ ಮೇಲ್ಪಟ್ಟ ಐಟಿ ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ ಭೀತಿ ಎದುರಾಗಿದೆ.
ಬೆಂಗಳೂರು, ಮೇ 15 : ಉದ್ಯೋಗ ಕಡಿತಕ್ಕೆ ಸಂಬಂಧಿಸಿದಂತೆ ಮಾಹಿತಿ ತಂತ್ರಜ್ಞಾನ (ಐ.ಟಿ) ವಲಯದಿಂದ ಐ.ಟಿ ಉದ್ಯೋಗಿಗಳಿಗೆ ನಡುಕ ಹುಟ್ಟಿಸುವಂತ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ.
ಮುಂದಿನ ಮೂರು ವರ್ಷಗಳಲ್ಲಿ 1.75 ಲಕ್ಷದಿಂದ 2 ಲಕ್ಷ ಐ.ಟಿ ಉದ್ಯೋಗಿಗಳು ಕೆಲಸ ಕಳೆದುಕೊಳ್ಳಲಿದ್ದಾರೆ ಎಂದು ಹೆಡ್ ಹಂಟರ್ಸ್ ಇಂಡಿಯಾ ಸಂಸ್ಥೆ ಹೇಳುವ ಮೂಲಕ ಐಟಿ ಉದ್ಯೋಗಿಗಳಿಗೆ ಶಾಕ್ ನೀಡಿದೆ.
ಕ್ಲೌಡ್‌ನಂತಹ ಹೊಸ ತಂತ್ರಜ್ಞಾನಗಳಿಗೆ ಒಗ್ಗಿಕೊಳ್ಳಲು 35 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯೋಮಾನದ ಸಿಬ್ಬಂದಿಗೆ ಸಾಧ್ಯವಾಗದ ಕಾರಣ ಅಂಥ ಸಿಬ್ಬಂದಿ ಕೆಲಸ ಕಳೆದುಕೊಳ್ಳಲಿದ್ದಾರೆ ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಕೆ. ಲಕ್ಷ್ಮೀಕಾಂತ್ ತಿಳಿಸಿದ್ದಾರೆ.[ಟ್ರಂಪ್ ನೀತಿಗೆ ಭಾರತೀಯ ಐಟಿ ಕ್ಷೇತ್ರ ತತ್ತರ]

56,000 ಐ.ಟಿ ಉದ್ಯೋಗಿಗಳು ಈ ವರ್ಷ ಕೆಲಸ ಕಳೆದುಕೊಳ್ಳಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ, ವಾಸ್ತವವಾಗಿ ಪ್ರತಿ ವರ್ಷ 1.75 ಲಕ್ಷದಿಂದ 2 ಲಕ್ಷ ಐ.ಟಿ ಉದ್ಯೋಗಿಗಳು ಕೆಲಸ ಕಳೆದುಕೊಳ್ಳಲಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಜಾಗತಿಕ ಸಮೀಕ್ಷಾ ಸಂಸ್ಥೆ ಮ್ಯಾಕ್ ಕಿನ್ಸ್ ಆಂಡ್ ಕಂಪೆನಿಯು ಫೆಬ್ರುವರಿಯಲ್ಲಿ ಸಾಫ್ಟ್‌ವೇರ್ ಮತ್ತು ಸೇವಾ ಸಂಸ್ಥೆಗಳ ರಾಷ್ಟ್ರೀಯ ಒಕ್ಕೂಟದ (ನಾಸ್ಕಾಂ) ಲೀಡರ್‌ಶಿಪ್ ಫೋರಂಗೆ ಸಲ್ಲಿಸಿದ ವರದಿಯನ್ನು ಅವರು ಉಲ್ಲೇಖಿಸಿದ್ದಾರೆ.
ಮುಂದಿನ ಮೂರು ನಾಲ್ಕು ವರ್ಷದಲ್ಲಿ ಭಾರತದ ಐ.ಟಿ ಕ್ಷೇತ್ರದ ಅರ್ಧಕ್ಕಿಂತ ಹೆಚ್ಚು ಉದ್ಯೋಗಿಗಳು 'ಅಪ್ರಸ್ತುತ'ವಾಗಲಿದ್ದಾರೆ ಎಂದು ಮ್ಯಾಕ್ ಕಿನ್ಸ್ ಆಂಡ್ ಕಂಪೆನಿ ತನ್ನ ವರದಿಯಲ್ಲಿ ಹೇಳಿದೆ.
ಐ.ಟಿ ಕ್ಷೇತ್ರದಲ್ಲಿ ಅಂದಾಜು 39 ಲಕ್ಷ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಆ ಪೈಕಿ ಹೆಚ್ಚಿನವರಿಗೆ ಹೊಸ ತಂತ್ರಜ್ಞಾನದ ತರಬೇತಿ ಅಗತ್ಯವಿದೆ. ಆದರೂ, ಶೇ 30-40ರಷ್ಟು ಸಿಬ್ಬಂದಿಯನ್ನು ಕೆಲಸದಲ್ಲಿ ಮುಂದುವರಿಸುವುದು ಅಸಾಧ್ಯವಾಗಲಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ನೋಶಿರ್ ಕಾಕಾ ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರು, ಕೊಯಮಂತ್ತೂರ್ ಮತ್ತು ಮುಂಬೈನಂತಹ ಮಹಾನಗರಗಳಲ್ಲಿಯ ಐ.ಟಿ ಉದ್ಯೋಗಿಗಳಿಗಿಂತ ಕೊಯಮತ್ತೂರು ಹಾಗೂ ಇನ್ನಿತರ ಎರಡನೇ ಹಂತದ ನಗರಗಳಲ್ಲಿಯ ಸಿಬ್ಬಂದಿ ಉದ್ಯೋಗ ಕಳೆದು ಕೊಳ್ಳಬಹುದು ಎಂದು ಅವರು ಹೇಳಿದ್ದಾರೆ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications