ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್: 2 ಸೈನಿಕರು ಹುತಾತ್ಮ, 2 ಉಗ್ರರ ಹತ್ಯೆ
ಬಂಡಿಪೊರ(ಜಮ್ಮು-ಕಾಶ್ಮೀರ), ಅಕ್ಟೋಬರ್ 11: ಜಮ್ಮು -ಕಾಶ್ಮೀರದ ಬಂಡಿಪೊರದ ಹಾಜಿನ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭಾರತೀಯ ಸೇನೆಯ ನಡುವೆ ನಡೆದ ಎನ್ ಕೌಂಟರ್ ವೊಂದರಲ್ಲಿ ಇಬ್ಬರು ಭಾರತೀಯ ಸೈನಿಕರು ಹುತಾತ್ಮರಾಗಿದ್ದು, ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈಯ್ಯುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ.
ಇಂದು ಬೆಳಗ್ಗಿನ ಜಾವ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ಆರಂಭವಾಗಿದ್ದು, ಇನ್ನೂ ಮುಂದುವರಿಯುತ್ತಿದೆ. ಎನ್ ಕೌಂಟರ್ ನಲ್ಲಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದರೆ ಮೂವರು ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಹತ್ಯೆಗೈಯ್ಯಲಾದ ಇಬ್ಬರು ಸೈನಿಕರನ್ನು ಲಷ್ಕರ್ ಇ ತೊಯ್ಬಾ ಸಂಘಟನೆಯ ಉಗ್ರರು ಎಂದು ಪತ್ತೆಹಚ್ಚಲಾಗಿದೆ. ಹುತಾತ್ಮರಾದ ಸೈನಿಕರು ಯಾರೆಂಬ ಕುರಿತು ಸದ್ಯಕ್ಕೆ ಮಾಹಿತಿ ಲಭ್ಯವಾಗಿಲ್ಲ.












Click it and Unblock the Notifications