ಮಣಿಪುರದಲ್ಲಿ ಅಮಾನವೀಯ ಘಟನೆ: ಮಹಿಳೆಯರನ್ನು ಬೆತ್ತಲಾಗಿಸಿ ಮೆರವಣಿಗೆ, ಸಾಮೂಹಿಕ ಅತ್ಯಾಚಾರ ಆರೋಪ
ಇಂಫಾಲ, ಜುಲೈ. 19: ಹಿಂಸಾಚಾರದಿಂದ ಈಗಾಗಲೇ ನಲುಗಿರುವ ಮಣಿಪುರದಲ್ಲಿ ಮತ್ತಷ್ಟು ಅಮಾನವೀಯ ಘಟನೆಗಳು ಬೆಳಕಿಗೆ ಬರುತ್ತಿವೆ. ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ರಸ್ತೆಯ ಮೇಲೆ ಬೆತ್ತಲೆಯಾಗಿ ಮೆರವಣಿಗೆ ಮಾಡಲಾಗಿದೆ. ಈ ಪೈಶಾಚಿಕ ಕೃತ್ಯದ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದ್ದು, ಭಾರೀ ಖಂಡನೆ ಮತ್ತು ಕ್ರಮಕ್ಕಾಗಿ ಒತ್ತಡ ವ್ಯಕ್ತವಾಗಿವೆ.
ಗದ್ದೆಯೊಂದರಲ್ಲಿ ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಬುಡಕಟ್ಟು ಸಂಘಟನೆಯೊಂದು ಆರೋಪಿಸಿದೆ. ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ (ITLF) ಹೇಳಿಕೆಯ ಪ್ರಕಾರ, ರಾಜ್ಯ ರಾಜಧಾನಿ ಇಂಫಾಲ್‌ನಿಂದ ಸುಮಾರು 35 ಕಿಮೀ ದೂರದಲ್ಲಿರುವ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೇ 4 ರಂದು ಈ ಘಟನೆ ಸಂಭವಿಸಿದೆ.

ಈ ಭಯಾನಕ ಘಟನೆಯ ಒಂದು ದಿನದ ಮೊದಲು, ಪರಿಶಿಷ್ಟ ಪಂಗಡಗಳ (ST) ಸ್ಥಾನಮಾನಕ್ಕಾಗಿ ಮೈತಿಯಿ ಸಮುದಾಯದ ಬೇಡಿಕೆಯ ಕುರಿತು ಕಣಿವೆಯ ಬಹುಸಂಖ್ಯಾತ ಮೈತಿಯಿ ಮತ್ತು ಬೆಟ್ಟದ ಬಹುಸಂಖ್ಯಾತ ಕುಕಿ ಬುಡಕಟ್ಟು ನಡುವೆ ಘರ್ಷಣೆಗಳು ಸಂಭವಿಸಿದವು. ಕುಕಿ ಬುಡಕಟ್ಟು ಜನಾಂಗವನ್ನು ಪ್ರತಿನಿಧಿಸುವ ಐಟಿಎಲ್‌ಎಫ್ ಹೇಳಿಕೆಯಲ್ಲಿ ಇಬ್ಬರು ಮಹಿಳೆಯರು ಕುಕಿ-ಜೋ ಬುಡಕಟ್ಟಿಗೆ ಸೇರಿದವರು ಎಂದು ಹೇಳಿದ್ದಾರೆ.
"ಇಂದು ವೈರಲ್ ಆಗಿರುವ ವಿಡಿಯೋದಲ್ಲಿ ಇಬ್ಬರು ಕುಕಿ-ಜೋ ಬುಡಕಟ್ಟು ಜನಾಂಗದ ಮಹಿಳೆಯರನ್ನು ಸಾಮೂಹಿಕ ಅತ್ಯಾಚಾರ ಮಾಡಲು ಭತ್ತದ ಗದ್ದೆಯ ಕಡೆಗೆ ಬೆತ್ತಲೆಯಾಗಿ ಎಳೆದುಕೊಂಡು ಹೋಗುತ್ತಿರುವ ದೊಡ್ಡ ಮೈತಿಯಿ ಗುಂಪನ್ನು ತೋರಿಸುತ್ತದೆ. ಮೇ 4 ರಂದು ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಸಂಭವಿಸಿದ ಈ ಹೇಯ ದೃಶ್ಯ, ಪುರುಷರು ನಿರಂತರವಾಗಿ ಅಸಹಾಯಕರನ್ನು ಹಿಂಸಿಸುವುದನ್ನು ತೋರಿಸುತ್ತದೆ" ಎಂದು ಐಟಿಎಲ್ಎಫ್ ಹೇಳಿದೆ.
मणिपुर से आ रही महिलाओं के खिलाफ यौन हिंसा की तस्वीरें दिल दहला देने वाली हैं। महिलाओं के साथ घटी इस भयावह हिंसा की घटना की जितनी निंदा की जाए कम है। समाज में हिंसा का सबसे ज्यादा दंश महिलाओं और बच्चों को झेलना पड़ता है।
— Priyanka Gandhi Vadra (@priyankagandhi) July 19, 2023
हम सभी को मणिपुर में शांति के प्रयासों को आगे बढ़ाते हुए…
"ಈ ಮುಗ್ಧ ಮಹಿಳೆಯರು ಅನುಭವಿಸಿದ ಭಯಾನಕ ಘಟನೆಯ ವಿಡಿಯೋವನ್ನು ದುಷ್ಕರ್ಮಿಗಳು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ" ಎಂದು ಐಟಿಎಲ್ಎಫ್ ಹೇಳಿದೆ. ಜೊತೆಗೆ ಘಟನೆ ಕುರಿತು ಕ್ರಮ ಕೈಗೊಳ್ಳಲು ರಾಷ್ಟ್ರೀಯ ಮಹಿಳಾ ಆಯೋಗ ಮತ್ತು ಪರಿಶಿಷ್ಟ ಪಂಗಡದ ರಾಷ್ಟ್ರೀಯ ಆಯೋಗಕ್ಕೆ ಮನವಿ ಮಾಡಿದೆ.
ಈ ಬಗ್ಗೆ ಯಾರನ್ನಾದರೂ ಬಂಧಿಸಲಾಗಿದೆಯೇ ಅಥವಾ ಪ್ರಕರಣ ದಾಖಲಿಸಲಾಗಿದೆಯೇ ಎಂಬುದರ ಕುರಿತು ಮಣಿಪುರ ಪೊಲೀಸರು ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ರಾಜಕೀಯ ನಾಯಕರು ಮತ್ತು ಇತರರು ಸಾಮಾಜಿಕ ಮಾಧ್ಯಮದಲ್ಲಿ ಮಣಿಪುರ ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ ಮತ್ತು ಭಯಾನಕ ಕೃತ್ಯದಲ್ಲಿ ಭಾಗಿಯಾದ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಮಣಿಪುರದಿಂದ ಬರುತ್ತಿರುವ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ಚಿತ್ರಗಳು ಹೃದಯ ವಿದ್ರಾವಕವಾಗಿವೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
"ಒಂದು ನಿರ್ದಿಷ್ಟ ಸಮುದಾಯಕ್ಕೆ ಸೇರಿದ ಮಹಿಳೆಯರನ್ನು ಗುಂಪೊಂದು ಬೆತ್ತಲೆಯಾಗಿ ಮೆರವಣಿಗೆ ಮಾಡುವ ಕುರಿತು ಮಣಿಪುರದಿಂದ ಗೊಂದಲದ ವೀಡಿಯೊಗಳು ಬರುತ್ತಿವೆ. ಅಲ್ಲಿನ ಎರಡು ಸಮುದಾಯಗಳ ಸಂಬಂಧಗಳಲ್ಲಿ ಸಂಪೂರ್ಣ ಹದಗೆಟ್ಟಿದೆ. ಮಣಿಪುರದಲ್ಲಿ ದ್ವೇಷವು ಗೆದ್ದಿದೆ" ಎಂದು ತ್ರಿಪುರಾದ ತಿಪ್ರಾ ಮೋಥಾ ಪಕ್ಷದ ಮುಖ್ಯಸ್ಥ ಪ್ರದ್ಯೋತ್ ಬಿಕ್ರಮ್ ಮಾಣಿಕ್ಯ ದೆಬ್ಬರ್ಮಾ ಹೇಳಿದ್ದಾರೆ.
ಮೇ 4 ರಿಂದ ಬಿಜೆಪಿ ಆಡಳಿತದ ಮಣಿಪುರದಲ್ಲಿ ಇಂಟರ್ನೆಟ್ ಅನ್ನು ನಿರ್ಬಂಧಿಸಲಾಗಿದೆ. ರಾಜ್ಯದಲ್ಲಿ ಇನ್ನೂ ಕೆಲವೆಡೆ ಹಿಂಸಾಚಾರದ ಘಟನೆಗಳು ನಡೆಯುತ್ತಿವೆ. ಬಿಜೆಪಿ ಸೇರಿರುವ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ರಾಜೀನಾಮೆ ನೀಡಬೇಕೆಂದು ಕುಕಿ ಬುಡಕಟ್ಟು ಜನಾಂಗದವರು ಒತ್ತಾಯಿಸಿದ್ದಾರೆ. ಜನಾಂಗೀಯ ಹಿಂಸಾಚಾರದಲ್ಲಿ 120 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಸಾವಿರಾರು ಜನರು ಆಂತರಿಕವಾಗಿ ಸ್ಥಳಾಂತರಗೊಂಡಿದ್ದಾರೆ ಮತ್ತು ಈಗ ಪರಿಹಾರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ.












Click it and Unblock the Notifications