ಭಾರತದಲ್ಲಿ 24 ಗಂಟೆಯಲ್ಲಿ 20,528 ಹೊಸ ಕೋವಿಡ್ ಪ್ರಕರಣ ದಾಖಲು
ಬೆಂಗಳೂರು, ಜುಲೈ 18: ದೇಶದಲ್ಲಿ ಸಾಂಕ್ರಾಮಿಕ ರೋಗ ಕೊರೊನಾ ಪ್ರಕರಣಗಳು 20 ಸಾವಿರದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 20,528 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ವರದಿಯಾಗಿವೆ. ಇದರಿಂದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 4,37,50,599 ಕ್ಕೆ ಏರಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,43,449 ಕ್ಕೆ ಏರಿಕೆಯಾಗಿದೆ.
ಭಾನುವಾರ 49 ಕೊರೊನಾ ಸಂಬಂಧಿತ ಸಾವುಗಳು ವರದಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 5,25,709 ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ. ಕೊರೊನಾ ಪ್ರಕರಣಗಳು 20 ಸಾವಿರದ ಗಡಿ ದಾಟ್ಟುತ್ತಿದ್ದರೂ, ರಾಷ್ಟ್ರೀಯ ಕೋವಿಡ್ ಚೇತರಿಕೆ ದರವು 98.47 ಪ್ರತಿಶತದಷ್ಟು ದಾಖಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 944 ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ.
Covid numbers in Karnataka:
— Dr Sudhakar K (@mla_sudhakar) July 17, 2022
▪️New cases in State: 944
▪️New cases in B'lore: 799
▪️Positivity rate: 3.25%
▪️Discharges: 670(B'lore-625)
▪️Deaths: 1
▪️Active cases in State: 7,569
▪️Active cases in B'lore: 6,878
▪️Tests: 29,022#COVID19 #COVID

944 ಜನರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಸೋಂಕಿನಿಂದ ಒಬ್ಬರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ರೇಟ್ ಶೇಕಡಾ 3.25 ರಷ್ಟಿದೆ. ರಾಜಧಾನಿ ಬೆಂಗಳೂರು ನಗರ ಒಂದರಲ್ಲೇ 799 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ರಾಜ್ಯದಲ್ಲಿ ಒಟ್ಟು ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 7,569 ಇದ್ದು, ಬೆಂಗಳೂರಿನಲ್ಲಿ 6,878 ಸಕ್ರಿಯ ಪ್ರರಣಗಳಿವೆ.
24 ಗಂಟೆಗಳಲ್ಲಿ 670 ಜನರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಒಟ್ಟು 29,022 ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದ್ದು ಈ ಪೈಕಿ 944 ಜನರಲ್ಲಿ ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆಯ ಅಂಕಿ ಅಂಶಗಳು ತಿಳಿಸಿವೆ.












Click it and Unblock the Notifications