ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪುದುಚೇರಿಯಲ್ಲಿ 20 ಮಕ್ಕಳಿಗೆ ಕೊರೊನಾ ಸೋಂಕು, ಆಸ್ಪತ್ರೆಯಲ್ಲಿ ಚಿಕಿತ್ಸೆ

|
Google Oneindia Kannada News

ಪುದುಚೇರಿ, ಜುಲೈ 15: ಪುದುಚೇರಿಯಲ್ಲಿ 20 ಮಕ್ಕಳಿಗೆ ಕೊರೊನಾ ಸೋಂಕು ತಗುಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊರೊನಾ ಮೂರನೇ ಅಲೆ ಶುರುವಾಗಿದೆಯೇ ಎಂಬ ಆತಂಕ ಎದುರಾಗಿದೆ, ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚು ಅಪಾಯ ಕಾದಿದೆ ಎಂದು ಕೆಲವು ತಜ್ಞರು ಹೇಳಿದ್ದು, ಇದೀಗ ಭಯ ಶುರುವಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕ ಎಸ್ ಮೋಹನ್ ಕುಮಾರ್, ಮಕ್ಕಳಲ್ಲಿ ನಡೆಸಿದ ಕೋವಿಡ್ 19 ಪರೀಕ್ಷೆಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ.

20 Children In Puducherry Hospitalised After Testing Positive For Covid

20 ಮಕ್ಕಳನ್ನು ಕದಿರ್ಕಮಂನಲ್ಲಿರುವ ಇಂದಿರಾ ಗಾಂಧಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ದೇಶದಲ್ಲಿ ಗುರುವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 41,806 ಮಂದಿಯಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 581 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,09,87,880ಕ್ಕೆ ತಲುಪಿದ್ದು, ಸಾವಿನ 4,11,989ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಗುಣಮುಖರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 4,32,041ಕ್ಕೆ ಕುಸಿದಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 39,130 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,01,43,850ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 19,43,488 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 43,80,11,958 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ

English summary
from Puducherry were hospitalised on Thursday after testing positive for COVID-19, Director of Health and Family Welfare services S Mohan Kumar said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X