ತಮಿಳುನಾಡು: ಕಾಡ್ಗಿಚ್ಚಿನಲ್ಲಿ ಸಿಲುಕಿದ 20 ವಿದ್ಯಾರ್ಥಿಗಳು, ಕೆಲವರ ರಕ್ಷಣೆ

Written By:
Subscribe to Oneindia Kannada

ಚೆನ್ನೈ, ಮಾರ್ಚ್ 11: ತಮಿಳುನಾಡಿನ ಥೇಣಿ ಜಿಲ್ಲೆಯ ಕುರಂಗಣಿ ಎಂಬಲ್ಲಿ ಭಾನುವಾರ ಹೊತ್ತಿಕೊಂಡಿರುವ ಕಾಡ್ಗಿಚ್ಚಿನ ನಡುವೆ ಸುಮಾರು 20 ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದರು. ಕೆಲವು ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದ್ದು, ಇನ್ನೂ ಕೆಲವು ವಿದ್ಯಾರ್ಥಿಗಳನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗಿದೆ.

ಟ್ರೆಕ್ಕಿಂಗ್‌ಗೆ ಹೋಗಿದ್ದ 20 ಮಮದಿ ವಿದ್ಯಾರ್ಥಿಗಳು ಕಾಡ್ಗಿಚ್ಚಿನ ನಡುವೆ ಸಿಲುಕಿಕೊಂಡಿದ್ದರು. ಭಾರತೀಯ ವಾಯು ಸೇನೆ ಸಹಾಯದಿಂದ ಕೆಲವರನ್ನು ರಕ್ಷಿಸಲಾಗಿದ್ದು, ಇನ್ನು ಕೆಲವು ವಿದ್ಯಾರ್ಥಿಗಳು ಕಾಡಿನಲ್ಲೇ ಇದ್ದಾರೆ ಎನ್ನಲಾಗಿದೆ.

20-students-are-reportedly-trapped-the-forest-fire-tamilnadu

ವಿದ್ಯಾರ್ಥಿಗಳು ಕಾಡ್ಗಿಚ್ಚಿನಲ್ಲಿ ಸಿಲುಕಿರುವ ವಿಷಯ ತಿಳಿದ ಕೂಡಲೇ ತಮಿಳು ನಾಡು ಮುಖ್ಯಮಂತ್ರಿ ಅವರು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಸಹಾಯ ಯಾಚಿಸಿದ್ದಾರೆ. ನಿರ್ಮಲಾ ಅವರು ಭಾರತೀಯ ವಾಯುಸೇನೆಯನ್ನು ನೆರವು ನೀಡುವಂತೆ ಆದೇಶಿಸಿದ್ದಾರೆ ತಕ್ಷಣವೇ ನೆರವಿಗೆ ಧಾವಿಸಿರುವ ಭಾರತೀಯ ವಾಯುಸೇನೆ ಕಾರ್ಯಾಚರಣೆ ನಡೆಸಿ 10-15 ವಿದ್ಯಾರ್ಥಿಗಳನ್ನು ರಕ್ಷಿಸಲು ಯಶಸ್ವಿಯಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ನಿರ್ಮಲಾ ಸೀತಾರಾಮನ್ ಅವರು ಕೆಲವು ವಿದ್ಯಾರ್ಥಿಗಳನ್ನು ರಕ್ಷಿಸಿರುವುದಾಗಿ ಮಾಹಿತಿ ಹಂಚಿಕೊಂಡಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
A massive forest fire broke out in Kurengini Hills in Tamil Nadu's Theni district on Sunday. At least 20 students are reportedly trapped in the fire.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ