ಛತ್ತೀಸ್‌ಗಢ: 20 ವರ್ಷದ ಯುವತಿಯನ್ನು 51 ಬಾರಿ ಇರಿದು ಕೊಂದ ಪ್ರೇಮಿ

ರಾಯಪುರ, ಡಿಸೆಂಬರ್‌ 27: ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯಲ್ಲಿ 20 ವರ್ಷದ ಯುವತಿಯನ್ನು 51 ಬಾರಿ ಇರಿದು ಕೊಲ್ಲಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಸೌತ್ ಈಸ್ಟರ್ನ್ ಕೋಲ್ ಫೀಲ್ಡ್ ಲಿಮಿಟೆಡ್ (ಎಸ್ ಇಸಿಎಲ್) ಪಂಪ್ ಹೌಸ್ ಕಾಲೋನಿಯಲ್ಲಿ ಶನಿವಾರ (ಡಿಸೆಂಬರ್ 24) ಈ ಘಟನೆ ನಡೆದಿದ್ದು, ಅಂದಿನಿಂದ ಆರೋಪಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪೊಲೀಸರ ಪ್ರಕಾರ, ಜಶ್‌ಪುರ ಜಿಲ್ಲೆಯವನಾದ ಆರೋಪಿ ಯುವತಿಗೆ ಪರಿಚಿತನಾಗಿದ್ದು, ಆಕೆಯ ಮನೆಯಲ್ಲಿ ಒಬ್ಬಂಟಿಯಾಗಿರುವಾಗ ಆಕೆಯನ್ನು ಭೇಟಿಯಾಗಲು ಬಂದಿದ್ದ.

ಇವರಿಬ್ಬರು ಭೇಟಿಯಾದಾಗ ಮತ್ತೊಬ್ಬ ವ್ಯಕ್ತಿಯ ಜತೆಗಿನ ಸಂಬಂಧದ ಬಗ್ಗೆ ವಾಗ್ವಾದಕ್ಕಿಳಿದಿದ್ದರು. ಆರೋಪಿ ಆಕೆಯ ಬಾಯಿಯನ್ನು ದಿಂಬಿನಿಂದ ಮುಚ್ಚಿದ್ದಾನೆ. ಆಕೆಯ ದೇಹಕ್ಕೆ 51 ಬಾರಿ ಇರಿದಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಂತೋಷ್ ಕುಮಾರ್ ಸಿಂಗ್ ಹೇಳಿದ್ದಾರೆ.

20-year-old woman stabbed 51 times in Chhattisgarh’s Korba: Police

ಸಂತ್ರಸ್ತೆಯ ಸಹೋದರ ಸೋಮವಾರ ಮನೆಗೆ ಬಂದಾಗ ರಕ್ತದ ಮಡುವಿನಲ್ಲಿ ಯುವತಿ ಬಿದ್ದಿದ್ದಳು ಎಂದು ಅವರು ಹೇಳಿದರು.

ಪೊಲೀಸರ ಪ್ರಕಾರ, ಆರೋಪಿಯು ಮೂರು ವರ್ಷಗಳ ಹಿಂದೆ ಸಂತ್ರಸ್ತೆಯ ಜೊತೆ ಸ್ನೇಹ ಬೆಳೆಸಿದ್ದ. ಆತ ಬಸ್‌ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದನು. ಮಹಿಳೆ ಅದರಲ್ಲಿ ಪ್ರಯಾಣಿಸುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

'ಆರೋಪಿ ನಂತರ ಕೆಲಸಕ್ಕಾಗಿ ಗುಜರಾತ್‌ನ ಅಹಮದಾಬಾದ್‌ಗೆ ತೆರಳಿದ್ದನು. ಇಬ್ಬರೂ ಫೋನ್‌ನಲ್ಲಿ ಸಂಪರ್ಕದಲ್ಲಿದ್ದರು. ಮಹಿಳೆ ಆತನೊಂದಿಗೆ ಫೋನ್‌ನಲ್ಲಿ ಮಾತನಾಡುವುದನ್ನು ನಿಲ್ಲಿಸಿದ ನಂತರ, ಆರೋಪಿ ಕೊರ್ಬಾದಲ್ಲಿ ಆಕೆಯನ್ನು ಭೇಟಿಯಾಗಲು ಬಂದಿದ್ದನು' ಎಂದು ಎಸ್‌ಪಿ ಸಿಂಗ್ ಹೇಳಿದ್ದಾರೆ.

ಆತನ ವಿರುದ್ಧ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿ ಪತ್ತೆಗೆ ನಾಲ್ಕು ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಂತೋಷ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+