200 ಕೋಟಿ ಸುಲಿಗೆ ಪ್ರಕರಣ: ಜಾಕ್ವೆಲಿನ್ ಫರ್ನಾಂಡಿಸ್ ಮಧ್ಯಂತರ ಜಾಮೀನು ನ.10ರವರೆಗೆ ವಿಸ್ತರಣೆ

ಜಾಕ್ವೆಲಿನ್ ಫರ್ನಾಂಡಿಸ್ ಅವರ ಮಧ್ಯಂತರ ಜಾಮೀನನ್ನು ನ್ಯಾಯಾಲಯ ನವೆಂಬರ್ 10 ರವರೆಗೆ ವಿಸ್ತರಿಸಿದೆ. ನ್ಯಾಯಾಲಯವು ಎಲ್ಲಾ ಕಕ್ಷಿದಾರರಿಗೆ ಆರೋಪಪಟ್ಟಿ ಮತ್ತು ಇತರ ಸಂಬಂಧಿತ ದಾಖಲೆಗಳನ್ನು ನೀಡುವಂತೆ ಜಾರಿ ನಿರ್ದೇಶನಾಲಯಕ್ಕೆ (ಇಡಿ) ನಿರ್ದೇಶಿಸಿದೆ.

ರಾನ್‌ಬಾಕ್ಸಿ ಸಂಸ್ಥೆಯ ಶಿವಿಂದರ್ ಸಿಂಗ್ ಅವರು ಬೇರೊಂದು ಹಣ ಅವ್ಯವಹಾರ ಪ್ರಕರಣದಲ್ಲಿ 2019ರಲ್ಲಿ ಜೈಲು ಸೇರಿದ್ದರು. ಅವರನ್ನು ಬಿಡಿಸಿಕೊಡುವ ಭರವಸೆ ನೀಡಿದ ಸುಕೇಶ್ ಚಂದ್ರಶೇಖರ್, ಶಿವಿಂದರ್ ಅವರ ಪತ್ನಿ ಅದಿತಿ ಸಿಂಗ್ ಅವರಿಂದ 200 ಕೋಟಿ ರೂ ಪಡೆದಿದ್ದರೆನ್ನಲಾಗಿದೆ. ಈ ಸಂಬಂಧ ಅದಿತಿ ಸಿಂಗ್ ನೀಡಿದ ದೂರಿನ ಮೇರೆಗೆ ಸುಕೇಶ್ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರಕರಣದ ತನಿಖೆ ನಡೆಸುತ್ತಾ ಹೋದಂತೆ ಸುಕೇಶ್ ಜೊತೆ ಸಂಬಂಧ ಇರುವವರ ಜಾಡು ಸಿಗತೊಡಗಿತು. ನಟಿ ಜಾಕೆಲಿನ್ ಫರ್ನಾಂಡಿಸ್ ಅವರೂ ಇದರಲ್ಲಿ ಭಾಗಿಯಾಗಿದ್ದು ಕಂಡು ಬಂತು. ಕಳೆದ ಡಿಸೆಂಬರ್‌ನಲ್ಲಿ ಪಿಎಂಎಲ್‌ಎ ಕಾಯ್ದೆ ಅಡಿ ಆರೋಪಪಟ್ಟಿ ದಾಖಲಿಸಿದ ಇಡಿ, ಜಾಕ್ವೆಲಿನ್ ಸೇರಿದಂತೆ ಕೆಲ ಬಾಲಿವುಡ್ ನಟ ನಟಿಯರನ್ನ ಪ್ರಕರಣದ ಸಾಕ್ಷಿದಾರರೆಂದು ತೋರಿಸಿದೆ. ಅದಾದ ಬಳಿಕ ಸುಕೇಶ್ ಚಂದ್ರಶೇಖರ್ ಜೊತೆ ಜಾಕ್ವೆಲಿನ್ ಫರ್ನಾಂಡಿಸ್ ನಿಕಟವಾಗಿರುವ ಫೋಟೋಗಳು ಇಂಟರ್ನೆಟ್‌ನಲ್ಲಿ ಪೋಸ್ಟ್ ಆಗತೊಡಗಿದವು.

200 crore extortion case: Jacqueline Fernandezs interim bail extended till November 10

ಜಾಕ್ವೆಲಿನ್ ಫರ್ನಾಂಡೀಸ್‌ಗೆ ಲಕ್ಸುರಿ ಬಿಎಂಡಬ್ಲ್ಯು ಕಾರ್ ಅನ್ನು ಗಿಫ್ಟ್ ಆಗಿ ಸುಕೇಶ್ ಚಂದ್ರಶೇಖರ್ ನೀಡಿದ್ದ. ಡೈಮೆಂಡ್ ಬ್ರಾಸಲೆಟ್‌, ಫ್ರಾಂಕ್ ಮುಲ್ಲರ್ ಲಕ್ಸುರಿ ವಾಚ್‌, ದುಬಾರಿ ಬೆಲೆಬಾಳುವ ಗುಸ್ಸಿ, ಚಾನಲ್‌ಬ್ಯಾಗ್‌ಗಳನ್ನು ಗಿಫ್ಟ್​ಗಳನ್ನು ನೀಡಿದ್ದರು. ಜೊತೆಗೆ ಕುದುರೆಯೊಂದನ್ನು ಗಿಫ್ಟ್ ಆಗಿ ಜಾಕ್ವೆಲಿನ್ ಫರ್ನಾಂಡೀಸ್‌ಗೆ ಸುಖೇಶ್ ಚಂದ್ರಶೇಖರ್ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಜಾಕ್ವೆಲಿನ್ ಮ್ಯಾನೇಜರ್ ಪ್ರಶಾಂತ್ ಅವರಿಗೆ ಸುಕೇಶ್ ಚಂದ್ರಶೇಖರ್ ಬೈಕ್ ಉಡುಗೊರೆಯಾಗಿ ನೀಡಿದ್ದರು ಎಂದು ಇಒಡಬ್ಲ್ಯು ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಶ್ರೀಲಂಕಾ ಮೂಲದ ಜಾಕ್ವೆಲಿನ್ ಫರ್ನಾಂಡಿಸ್ 25ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಅವರು ಹೆಚ್ಚಾಗಿ ಬಾಲಿವುಡ್ ಚಿತ್ರಗಳಲ್ಲೇ ಕಾಣಿಸಿಕೊಂಡಿದ್ದಾರೆ. ಕಿಚ್ಚ ಸುದೀಪ್ ಜೊತೆ ವಿಕ್ರಾಂತ್ ರೋಣ ಸಿನಿಮಾದಲ್ಲಿ ಅವರು ನಾಯಕನಟಿಯಾಗಿದ್ದಾರೆ. ಈ ಚಿತ್ರ ಬಿಡುಗಡೆಯಾಗಿ 'ರಾ ರಾ ರಕ್ಕಮ್ಮ' ಹಾಡಿನಲ್ಲಿ ಜಾಕ್ವೆಲಿನ್ ಮನೆ ಮಾತಾಗಿದ್ದಾರೆ.

200 crore extortion case: Jacqueline Fernandezs interim bail extended till November 10

ಮಾಧ್ಯಮ ವರದಿಗಳ ಪ್ರಕಾರ, ಜಾಕ್ವೆಲಿನ್ ಫರ್ನಾಂಡಿಸ್ ಮತ್ತು ಸುಕೇಶ್ ಚಂದ್ರಶೇಖರ್ ನಡುವೆ ಉತ್ತಮ ಸಂಬಂಧವಿತ್ತು. ಜಾಕ್ವೆಲಿನ್ ಸುಕೇಶ್ ವಿಚಾರಗಳು ತಿಳಿದೂ ತುಂಬಾ ಸಂತೋಷಪಟ್ಟಿದ್ದರು. ಅವನ ಅಪರಾಧಗಳು ಬಹಿರಂಗವಾದ ನಂತರವೂ ಅವಳು ಅವನೊಂದಿಗೆ ನಿರಂತರ ಸಂಪರ್ಕದಲ್ಲಿದ್ದಳು. ಮಾತ್ರವಲ್ಲದೆ ಜಾಕ್ವೆಲಿನ್ ಸುಕೇಶ್ ಅವರನ್ನು ಮದುವೆಯಾಗಲು ಬಯಸಿದ್ದರಂತೆ. ಈ ಹಿಂದೆ ANI ಜೊತೆ ಮಾತನಾಡಿದ ವಿಶೇಷ ಪೊಲೀಸ್ ಕಮಿಷನರ್, ರವೀಂದರ್ ಯಾದವ್, 'ಜಾಕ್ವೆಲಿನ್ ಫರ್ನಾಂಡೀಸ್ ಅವರು ಸುಕೇಶ್ ಅವರ ಅಪರಾಧ ಇತಿಹಾಸವನ್ನು ತಿಳಿದ ನಂತರವೂ ಸಂಬಂಧವನ್ನು ಮುಂದುವರೆಸಿದ್ದರು. ಇದರಿಂದಾಗಿ ಅವರು ಈಗ ಹೆಚ್ಚು ತೊಂದರೆಯಲ್ಲಿದ್ದಾರೆ. ಆದರೆ, ನೋರಾ ಫತೇಹಿ ಸುಕೇಶನ ಸತ್ಯವನ್ನು ತಿಳಿದಾಗ ತಕ್ಷಣ ಅವನಿಂದ ದೂರವಾದರು' ಎಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+