ಕೊರೊನಾ ಡಬಲ್: ಭಾರತದಲ್ಲಿ ಒಂದೇ ದಿನ 2 ಲಕ್ಷಕ್ಕೂ ಅಧಿಕ ಮಂದಿಗೆ ಸೋಂಕು

ನವದೆಹಲಿ, ಏಪ್ರಿಲ್ 15: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಕಳೆದ 10 ದಿನಗಳಲ್ಲೇ ಡಬಲ್ ಆಗಿದೆ. 10 ದಿನಗಳ ಹಿಂದೆ 1 ಲಕ್ಷದ ಆಸುಪಾಸಿನಲ್ಲಿದ್ದ ಸೋಂಕಿತ ಪ್ರಕರಣಗಳ ಸಂಖ್ಯೆ ಗುರುವಾರ 2 ಲಕ್ಷದ ಗಡಿ ದಾಟಿದೆ.

ದೇಶದಲ್ಲಿ ಒಂದೇ ದಿನ 2,00,739 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 1038 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 93,528 ಸೋಂಕಿತರು ಗುಣಮುಖರಾಗಿದ್ದಾರೆ.

ಗುರುವಾರದ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1,40,74,564ಕ್ಕೆ ಏರಿಕೆಯಾಗಿದೆ. ಇದುವರೆಗೂ 1,73,123 ಜನರು ಕೊವಿಡ್-19 ಸೋಂಕಿಗೆ ಬಲಿಯಾಗಿದ್ದರೆ, 1,24,29,564 ಸೋಂಕಿತರು ಗುಣಮುಖರಾಗಿದ್ದಾರೆ. 14,71,877 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಒಂದೇ ದಿನ 13 ಲಕ್ಷ ಜನರಿಗೆ ಕೊವಿಡ್-19 ತಪಾಸಣೆ

ಒಂದೇ ದಿನ 13 ಲಕ್ಷ ಜನರಿಗೆ ಕೊವಿಡ್-19 ತಪಾಸಣೆ

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪತ್ತೆಗೆ ತಪಾಸಣೆ ವೇಗವನ್ನು ಹೆಚ್ಚಿಸಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 13,84,549 ಜನರ ಮಾದರಿಯನ್ನು ತಪಾಸಣೆಗೊಳಪಡಿಸಲಾಗಿದೆ. ದೇಶದಲ್ಲಿ ಈವರೆಗೂ 26,20,03,415 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

ದೇಶದಲ್ಲಿ 11.44 ಕೋಟಿ ಫಲಾನುಭವಿಗಳಿಗೆ ಲಸಿಕೆ

ದೇಶದಲ್ಲಿ 11.44 ಕೋಟಿ ಫಲಾನುಭವಿಗಳಿಗೆ ಲಸಿಕೆ

ಭಾರತದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 89 ದಿನಗಳಲ್ಲಿ 11 ಕೋಟಿಗೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ. ಬುಧವಾರ ಒಂದೇ ದಿನ 31,39,063 ಜನರಿಗೆ ಲಸಿಕೆ ನೀಡಲಾಗಿದೆ. ಈ ಪೈಕಿ 27,19,964 ಫಲಾನುಭವಿಗಳಿಗೆ ಮೊದಲ ಡೋಸ್, 4,19,099 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೂ 11,44,93,238 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಯಾವ ಫಲಾನುಭವಿಗಳಿಗೆ ಎಷ್ಟು ಲಸಿಕೆ ನೀಡಲಾಗಿದೆ.

ದೇಶದಲ್ಲಿ ಮೂರು ಮಾದರಿ ಕೊರೊನಾ ಲಸಿಕೆ ವಿತರಣೆ

ದೇಶದಲ್ಲಿ ಮೂರು ಮಾದರಿ ಕೊರೊನಾ ಲಸಿಕೆ ವಿತರಣೆ

ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಇದರ ಮಧ್ಯೆ ಮಾಸ್ಕೋ, ರಷ್ಯಾದಲ್ಲಿ ಗಮಲೇಯ ನ್ಯಾಷನಲ್ ರಿಸರ್ಚ್ ಇನ್ಸ್ ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಅಭಿವೃದ್ಧಿಪಡಿಸಿದ ಸ್ಪುಟ್ನಿಕ್-ವಿ ಲಸಿಕೆ ವಿತರಿಸುವುದಕ್ಕೂ ಅನುಮೋದನೆ ನೀಡಲಾಗಿದೆ.

ವಿಶ್ವದಾದ್ಯಂತ ಕೊವಿಡ್-19 ಸೋಂಕಿತ ಪ್ರಕರಣ

ವಿಶ್ವದಾದ್ಯಂತ ಕೊವಿಡ್-19 ಸೋಂಕಿತ ಪ್ರಕರಣ

ವಿಶ್ವದಲ್ಲಿ ಒಂದೇ ದಿನ ಒಟ್ಟು 8,03,194 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಜಗತ್ತಿನಾದ್ಯಂತ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 13,88,20,166ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಮಹಾಮಾರಿಗೆ 13513 ಜನರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 29,84,901ಕ್ಕೆ ಏರಿಕೆಯಾಗಿದೆ. ಈವರೆಗೂ ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೊವಿಡ್-19 ಸೋಂಕಿಗೆ ನೀಡಿದ ಚಿಕಿತ್ಸೆಯಿಂದಾಗಿ ಒಟ್ಟು 11,16,05,220 ಸೋಂಕಿತರು ಗುಣಮುಖರಾಗಿದ್ದಾರೆ. ಈ ಪೈಕಿ 2,42,30,045 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+