ಭಾರತದಲ್ಲಿ 25 ವರ್ಷಗಳಲ್ಲೇ 2019ರಲ್ಲಿ ಅಧಿಕ ವಿದ್ಯಾರ್ಥಿಗಳು ಆತ್ಮಹತ್ಯೆ

ನವದೆಹಲಿ, ಸೆಪ್ಟೆಂಬರ್ 08: ಭಾರತದಲ್ಲಿ ಕಳೆದ 25 ವರ್ಷಗಳಲ್ಲಿ 2019ರಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

2019ರಲ್ಲಿ ಪ್ರತಿ ಒಂದು ತಾಸಿಗೆ ಓರ್ವ ವಿದ್ಯಾರ್ಥಿಯಂತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಟ್ಟು 10,335 ಮಂದಿ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದು 25 ವರ್ಷಗಳಲ್ಲೇ ಅತ್ಯಧಿಕ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣವಾಗಿದೆ.

1995ರ ಜನವರಿ 1 ರಿಂದ 2019ರ ಡಿಸೆಂಬರ್ 31ರವರೆಗಿನ ಡಾಟಾವನ್ನು ಬಳಸಿಕೊಳ್ಳಲಾಗಿದೆ. 1.7 ಲಕ್ಷಕ್ಕೂ ಅಧಿಕ ಮಂದಿ ವಿದ್ಯಾರ್ಥಿಗಳು ಈ ಅವಧಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

2019 Saw Most Student Suicide Cases In India

1995-2008ರ ಅವಧಿಯಲ್ಲಿ 85,824 ಮಂದಿ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವೆಲ್ಲದ್ದಕ್ಕೂ ಖಿನ್ನತೆ, ಮಾದಕದ್ರವ್ಯ ಸೇವನೆಯೇ ಮುಖ್ಯ ಕಾರಣವಾಗಿದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.

1995-1999ರ ಸಮಯದಲ್ಲಿ 27,359 ಮಂದಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2000-2004 ರಲ್ಲಿ 27,880, 2005-2009 ರಲ್ಲಿ 30,064, 2010-2014 ರಲ್ಲಿ 38, 220, 2015-2019ರ ಅವಧಿಯಲ್ಲಿ 48,537 ಮಂದಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+