2026: ಈ ಕಾರಣಕ್ಕೆ ಭಾರತದಲ್ಲಿ ಉದ್ಯೋಗ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಲಿದೆ: ವರದಿ
ಭಾರತದಲ್ಲಿ ಇನ್ನಷ್ಟು ಉದ್ಯೋಗ ನಷ್ಟವಾಗುವ ಆತಂಕ ಶುರುವಾಗಿದೆ. ಕಳೆದ ಕೆಲವು ವರ್ಷಗಳಿಂದ ಭಾರತದಾದ್ಯಂತ ಹಾಗೂ ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಉದ್ಯೋಗ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಇದೇ ಸಂದರ್ಭದಲ್ಲಿ ಉನ್ನತ ಶಿಕ್ಷಣ ಮಾಡಿರುವವರಿಗೆ ಉದ್ಯೋಗ ಸಿಗುತ್ತಿಲ್ಲ. ಇದೀಗ 2026ನೇ ಸಾಲಿನಲ್ಲಿ ಉದ್ಯೋಗದ ವಿಚಾರದಲ್ಲಿ ಇನ್ನಷ್ಟು ಸವಾಲುಗಳು ಎದುರಾಗುವ ಸಾಧ್ಯತೆ ಇದೆ. ಅಲ್ಲದೇ ಸಾವಿರಾರು ಜನ ಉದ್ಯೋಗ ಕಳೆದುಕೊಳ್ಳುವ ಆತಂಕವೂ ಇದೆ ಎನ್ನುವ ವರದಿ ಬಹಿರಂಗವಾಗಿದೆ.
2025ನೇ ವರ್ಷವು ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಇರುವ ಐಟಿ - ಬಿಟಿ ಸೇರಿದಂತೆ ವಿವಿಧ ಉದ್ಯೋಗಿಗಳಿಗೆ ಕರಾಳ ವರ್ಷವಾಗಿತ್ತು ಎಂದೇ ಹೇಳಬಹುದು. ಐಟಿ - ಬಿಟಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ಮಾಡುತ್ತಿರುವ ಲಕ್ಷಾಂತರ ಜನ ಉದ್ಯೋಗ ಕಳೆದುಕೊಂಡ ವರ್ಷವಿದು. ಇದೀಗ 2026ನೇ ಸಾಲಿನಲ್ಲೂ ಸಾವಿರಾರು ಜನ ಉದ್ಯೋಗ ಕಳೆದುಕೊಳ್ಳುವ ಸಾಧ್ಯತೆ ಇದೆ ವರದಿಯೊಂದು ಉಲ್ಲೇಖಿಸಿದೆ.

ದೇಶದಲ್ಲಿ ಎಐ ಕೃತಕ ಬುದ್ಧಿಮತ್ತೆ (Artificial Intelligence) ಬಳಕೆ ಹೆಚ್ಚಾಗುತ್ತಿದ್ದು, ಇದರಿಂದ ಹಲವರು ಉದ್ಯೋಗ ಕಳೆದುಕೊಳ್ಳುವ ಆತಂಕಕ್ಕೆ ಒಳಗಾಗಿದ್ದಾರೆ. ಎಐನಿಂದ ಮುಖ್ಯವಾಗಿ 2025-26ರಲ್ಲಿ ಐಟಿ ಫ್ರೆಶರ್‌ಗಳ ನೇಮಕಾತಿ ಕಡಿಮೆಯಾಗುವ ಸಾಧ್ಯತೆ ಇದೆ. 2025-26ರಲ್ಲಿ ಭಾರತದಲ್ಲಿ ಹೊಸಬರ ನೇಮಕಾತಿ ನಿಧಾನವಾಗುವ ಸಾಧ್ಯತೆ ಇದೆ. ಏಕೆಂದರೆ ಕಂಪನಿಗಳು ಹೆಚ್ಚಾಗಿ ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯನ್ನು ಅಳವಡಿಸಿಕೊಳ್ಳುತ್ತಿರುವುದರಿಂದ ವೆಚ್ಚಗಳನ್ನು ಕಡಿಮೆ ಮಾಡುತ್ತಿವೆ. ಐಟಿ ಮತ್ತು ತಂತ್ರಜ್ಞಾನ ವಲಯದಿಂದ ಬೇಡಿಕೆ ಕಡಿಮೆಯಾಗಿರುವುದರಿಂದ ಹೊಸ ನೇಮಕಾತಿ ಇಳಿಕೆ ಹಾಗೂ ಈಗಾಗಲೇ ಉದ್ಯೋಗದಲ್ಲಿ ಇರುವವರು ಉದ್ಯೋಗ ಕಳೆದುಕೊಳ್ಳುವ ಆತಂಕ ಶುರುವಾಗಿದೆ.
ಭಾರತದ ಎಂಜಿನಿಯರಿಂಗ್ ಕಾಲೇಜುಗಳಿಂದ ಪ್ರತಿ ವರ್ಷ ಸುಮಾರು ಒಂಬತ್ತು ಲಕ್ಷ ಬಿಇ ಮತ್ತು ಬಿಟೆಕ್ ಪದವೀಧರರು ಉದ್ಯೋಗ ಕ್ಷೇತ್ರಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಈ ಗುಂಪಿನಲ್ಲಿ, 2025-26ರಲ್ಲಿ ಸುಮಾರು 1.2 ಲಕ್ಷ ಫ್ರೆಶರ್‌ಗಳು ಮಾತ್ರ ತಂತ್ರಜ್ಞಾನ ವಲಯಕ್ಕೆ ಸೇರ್ಪಡೆಗೊಳ್ಳುವ ನಿರೀಕ್ಷೆ ಇದೆ. ಕಳೆದ ವರ್ಷಕ್ಕಿಂತ ಇದು ಬದಲಾಗಿಲ್ಲ ಎಂದು ಟೆಕ್ ಸಿಬ್ಬಂದಿ ಸಂಸ್ಥೆ ಎಕ್ಸ್‌ಫೆನೊದ ದತ್ತಾಂಶ ತಿಳಿಸಿದೆ. ಇದು ಪ್ರಸಕ್ತ ವರ್ಷಕ್ಕೆ 1.5 ಲಕ್ಷ ನೇಮಕಾತಿಗಳ ಹಿಂದಿನ ನಿರೀಕ್ಷೆಗಳಿಗಿಂತ ಗಮನಾರ್ಹವಾಗಿ ಕಡಿಮೆಯಾಗಿದೆ ಎಂದು ಹೇಳಿದೆ.
ಭಾರತೀಯ ಐಟಿ ಕಂಪನಿಗಳಿಗೆ ಪ್ರಮುಖ ಆದಾಯದ ಮೂಲವಾದ ಯುಎಸ್ ಮಾರುಕಟ್ಟೆಯಲ್ಲಿನ ಅನಿಶ್ಚಿತತೆಯು ನೇಮಕಾತಿ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರಿದೆ. ಪ್ರಸ್ತುತ ಹಣಕಾಸು ವರ್ಷದ ಮೊದಲ ಆರು ತಿಂಗಳಲ್ಲಿ, ಏಳು ದೊಡ್ಡ ಐಟಿ ಸೇವಾ ಸಂಸ್ಥೆಗಳು ಒಟ್ಟಾಗಿ 23,000 ಫ್ರೆಶರ್‌ಗಳನ್ನು ನೇಮಕ ಮಾಡಿಕೊಂಡಿದೆ. ಇದು ಉದ್ಯೋಗದಾತರು ಅಳವಡಿಸಿಕೊಳ್ಳುತ್ತಿರುವ ಎಚ್ಚರಿಕೆಯ ವಿಧಾನ ಎಂದು ಹೇಳಲಾಗಿದೆ.
ಕೈಗಾರಿಕೆಗಳಲ್ಲಿ ಪ್ರವೇಶ ಮಟ್ಟದ ಪ್ರತಿಭೆಗಳಿಗೆ (Freshers) ಒಟ್ಟಾರೆ ಬೇಡಿಕೆ ಪ್ರಸ್ತುತ 50,000 ಕ್ಕಿಂತ ಕಡಿಮೆ ಇದೆ ಎಂದು ಅಂದಾಜಿಸಲಾಗಿದೆ. ತಂತ್ರಜ್ಞಾನ ವಲಯವು ಈ ಅವಶ್ಯಕತೆಯ ಮೂರನೇ ಒಂದು ಭಾಗದಷ್ಟಿದೆ. ಕಂಪನಿಗಳು ಹೊಸ ತಂತ್ರಜ್ಞಾನ ಹೆಚ್ಚಾಗಿ ಬಳಕೆ ಮಾಡುತ್ತಿರುವುದು ಹಾಗೂ ವೆಚ್ಚಗಳಿಗೆ ಕಡಿವಾಣ ಹಾಕುತ್ತಿರುವುದು ಈ ಹೊಸ ಬದಲಾವಣೆಗೆ ಕಾರಣವಾಗಿದೆ.
ಕ್ಯಾಂಪಸ್ ನೇಮಕಾತಿಯ ಮೇಲೆ ಪರಿಣಾಮ
ಇನ್ನು ಐಟಿ - ಬಿಟಿ ಕ್ಷೇತ್ರದಲ್ಲಿ ನೇಮಕಾತಿ ಪ್ರಕ್ರಿಯೆ ಮೇಲೆ ಪರಿಣಾಮ ಬೀರಿರುವುದರಿಂದ ಕ್ಯಾಂಪಸ್ ನೇಮಕಾತಿಯ ಮೇಲೂ ಪರಿಣಾಮ ಬೀರುತ್ತಿದೆ. ತಂತ್ರಜ್ಞಾನ ವ್ಯವಸ್ಥೆಯಲ್ಲಿ ಪ್ರತಿಭೆ ಸೃಷ್ಟಿಯ ಬೆನ್ನೆಲುಬಾಗಿರುವ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆ ಮೇಲೂ ಪರಿಣಾಮ ಬೀರುತ್ತಿದೆ. ವಾರ್ಷಿಕವಾಗಿ ಅಂದಾಜು 9 ಲಕ್ಷ ಎಂಜಿನಿಯರಿಂಗ್ ಪದವೀಧರರು ಉದ್ಯೋಗ ಮಾರುಕಟ್ಟೆಗೆ ಪ್ರವೇಶಿಸುತ್ತಿದ್ದಾರೆ.
ಒಟ್ಟು ಪದವೀಧರರಲ್ಲಿಸುಮಾರು 2.3 ಲಕ್ಷ ಜನರು ಕಂಪ್ಯೂಟರ್ ಸೆನ್ಸ್ ವಿಭಾಗದಿಂದ ಬಂದವರಾಗಿದ್ದರೆ, ಸುಮಾರು 13,000 ಜನರು ಐಐಟಿಗಳು, ಎನ್‌ಐಟಿಗಳು, ಬಿಐಟಿಎಸ್ ಮತ್ತು ಇತರ ಪ್ರಮುಖ ಕಾಲೇಜುಗಳಂತಹ ಉನ್ನತ ಸಂಸ್ಥೆಗಳಿಂದ ಬಂದಿದ್ದಾರೆ. ಆದರೆ ನೇಮಕಾತಿ ಪ್ರಕ್ರಿಯೆ ವಿಳಂಬವಾಗುತ್ತಿದೆ ಎಂದು ಹೇಳಲಾಗಿದೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications