ದೆಹಲಿಯ ಪಾರ್ಕಿಂಗ್‌ ಜಾಗದಲ್ಲಿ ಅಗ್ನಿ ದುರಂತ: ಸುಟ್ಟು ಕರಕಲಾದ 21 ಕಾರುಗಳು

ನವದೆಹಲಿ, ಡಿಸೆಂಬರ್‌ 26: ಪಶ್ಚಿಮ ದೆಹಲಿಯ ಸುಭಾಷ್ ನಗರದಲ್ಲಿನ ಬಹುಮಹಡಿ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಲಾಗಿದ್ದ 21 ಕಾರುಗಳು ಸೋಮವಾರ ಬೆಳಗ್ಗೆ ಬೆಂಕಿಗೆ ಆಹುತಿಯಾಗಿವೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಕಿ ಅವಘಡಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರಾಥಮಿಕ ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಓಡಾಡುತ್ತಿರುವ ದೃಶ್ಯಗಳು ಕಂಡುಬಂದಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶಂಕಿತನನ್ನು ಗುರುತಿಸಲಾಗಿದೆ ಮತ್ತು ಪೊಲೀಸರು ಆತನನ್ನು ಬಂಧಿಸಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

'ಘಟನೆಯ ನಿಖರವಾದ ಕಾರಣವನ್ನು ತನಿಖೆ ಮಾಡಲು ಹಲವು ತಂಡಗಳನ್ನು ರಚಿಸಲಾಗಿದೆ. ತನಿಖೆ ನಡೆಯುತ್ತಿದೆ' ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮುಂಜಾನೆ 4 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಆರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.

21 cars destroyed in multi-storey parking lot fire in west Delhi

ಬೆಳಗ್ಗೆ 6:10ರ ವೇಳೆಗೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು ಎಂದು ಹಿರಿಯ ಅಗ್ನಿಶಾಮಕ ಅಧಿಕಾರಿಯೊಬ್ಬರು ತಿಳಿಸಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ಭಾರೀ ಚಳಿ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಚಳಿ ಗಾಳಿ ಬೀಸುತ್ತಿದೆ. ಉತ್ತರ ಭಾರತದ ಹಲವು ರಾಜ್ಯಗಳಿಗೆ ಮುಂದಿನ ಐದು ದಿನಗಳವರೆಗೆ ಮಂಜು ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಭಾನುವಾರ ನೀಡಿದೆ.

21 cars destroyed in multi-storey parking lot fire in west Delhi

ಮುಂದಿನ 24 ಗಂಟೆಗಳಲ್ಲಿ ಪಂಜಾಬ್‌ನ ಹಲವು ಭಾಗಗಳಲ್ಲಿ ಮತ್ತು ಹರಿಯಾಣ ಮತ್ತು ಚಂಡೀಗಢದ ಕೆಲವು ಭಾಗಗಳಲ್ಲಿ ದಟ್ಟವಾದ ಮಂಜು ಸುರಿಯುವ ಸಾಧ್ಯತೆಯಿದೆ.

ಪಶ್ಚಿಮ ಉತ್ತರ ಪ್ರದೇಶ ಮತ್ತು ಉತ್ತರ ರಾಜಸ್ಥಾನದ ಪ್ರತ್ಯೇಕ ಪ್ರದೇಶಗಳಲ್ಲಿ ದಟ್ಟವಾದ ಮಂಜು ಸುರಿಯುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.

ಹರಿಯಾಣ, ಚಂಡೀಗಢ ಮತ್ತು ಪಶ್ಚಿಮ ಉತ್ತರ ಪ್ರದೇಶದ ಪ್ರತ್ಯೇಕ ಪ್ರದೇಶಗಳಲ್ಲಿ ದಟ್ಟವಾದ ಮಂಜು ಸುರಿಯುವ ಸಾಧ್ಯತೆಯಿದೆ. ಇದು ಮುಂದಿನ ಮೂರು ದಿನಗಳವರೆಗೆ ಮುಂದುವರಿಯಲಿದೆ.

ಮುಂದಿನ 24 ಗಂಟೆಗಳಲ್ಲಿ ಕೊರೆಯುವ ಚಳಿಯನ್ನು ದೆಹಲಿಯ ಎದುರಿಸುವ ಸಾಧ್ಯತೆಯಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+