ಸಾಮೂಹಿಕ ಅತ್ಯಾಚಾರ ಎಸಗಿ ಯುವತಿಯನ್ನು ರಸ್ತೆಯಲ್ಲಿ ಬಿಸಾಡಿದ ದುರುಳರು!
ಚಂಡಿಗಢ, ನವೆಂಬರ್ 18: ಆಟೋರಿಕ್ಷಾದಲ್ಲಿ ಮನೆಗೆ ಬರುತ್ತಿದ್ದ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನೆ ನ.17 ರ ಸಂಜೆ ಚಂಡಿಗಢದ ಸೆಕ್ಟರ್ 53 ರಲ್ಲಿ ನಡೆದಿದೆ.
ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ದುರುಳರು ಆಕೆಯನ್ನು ರಸ್ತೆಯ ಬದಿಯಲ್ಲಿ ಬಿಸಾಕಿ ಹೋಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆಕೆ ಆಟೋದಿಂದ ಇಳಿದ ನಂತರ ಆಕೆಯನ್ನು ಅಪಹರಿಸಿ ಈ ಕೃತ್ಯ ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದು, ಪ್ರಕರಣ ದಾಖಲಿಸಿದ್ದಾರೆ.

ಸಂತ್ರಸ್ಥೆಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅಪರಾಧಿಗಳ ಪತ್ತೆಗೆ ಪೊಲೀಸರು ಬಲೆಬೀಸಿದ್ದಾರೆ.
ನ.14 ರಂದು ಬೆಂಗಳೂರಿನಲ್ಲಿ ಅಪ್ರಾಪ್ತ ಯುವತಿಯೊಬ್ಬಳ ಮೇಲೆ 9 ದಿನಗಳ ಕಾಲ ನಿರಂತರ ಸಾಮೂಹಿಕ ಅತ್ಯಾಚಾರ ನಡೆದ ಘಟನೆ ಬೆಳಕಿಗೆ ಬಂದಿತ್ತು.
ದಿನೇ ದಿನೇ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದು ಮಹಿಳಾ ಸುರಕ್ಷತೆಯ ಬಗ್ಗೆ ಸರ್ಕಾರ ಮತ್ತಶಃ್ಟು ಗಂಭಿರವಾಗಿ ಯೋಚಿಸಬೇಕಿದೆ ಎಮಬ ಕೂಗು ಕೇಳಿಬರುತ್ತಿದೆ.












Click it and Unblock the Notifications