Get Updates
Get notified of breaking news, exclusive insights, and must-see stories!

ಬೆಚ್ಚಿ ಬೀಳಿಸುವ ಸುದ್ದಿ: ಭಾರತದಲ್ಲಿ ಕೊರೊನಾವೈರಸ್ ಕಥೆ ಹೀಗ್ಯಾಕಾಯ್ತು?

ನವದೆಹಲಿ, ಏಪ್ರಿಲ್ 16: ಕೊರೊನಾವೈರಸ್ ಸೋಂಕಿನ ಎರಡನೇ ಅಲೆ ಹರಡುವಿಕೆ ಈ ಹಿಂದಿನ ಎಲ್ಲ ದಾಖಲೆಗಳನ್ನು ಮೀರಿ ಬೆಳೆಯುತ್ತಿದೆ. ಜಗತ್ತಿನಲ್ಲೇ ಹೆಚ್ಚು ಸೋಂಕಿತ ಪ್ರಕರಣಗಳನ್ನು ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಟಾಪ್-1 ಸ್ಥಾನಕ್ಕೇರುವ ದಿನಗಳನ್ನು ಇನ್ನೇನು ಸನ್ನಿಹಿತ ಎನ್ನಿಸುತ್ತಿದೆ.

ಕೊವಿಡ್-19 ಸೋಂಕಿನ ಅಪಾಯದಲ್ಲಿ ಅಮೆರಿಕಾವನ್ನು ಹಿಂದಿಕ್ಕುವ ಮಟ್ಟಕ್ಕೆ ಹೊಸ ಪ್ರಕರಣಗಳು ವರದಿಯಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ 2,17,353 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಖಾತ್ರಿಯಾಗಿದೆ.

ಒಂದು ದಿನದಲ್ಲಿ 1185 ಮಂದಿ ಕೊವಿಡ್-19 ಸೋಂಕಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 1,74,308ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ 1,18,302 ಸೋಂಕಿತರು ಗುಣಮುಖರಾಗಿದ್ದು, ಈವರೆಗೂ 1,25,47,866 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಒಟ್ಟು 1,42,91,917 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಪ್ರಸ್ತುತ 15,69,743 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಒಂದೇ ದಿನ 14 ಲಕ್ಷ ಜನರಿಗೆ ಕೊವಿಡ್-19 ತಪಾಸಣೆ

ಒಂದೇ ದಿನ 14 ಲಕ್ಷ ಜನರಿಗೆ ಕೊವಿಡ್-19 ತಪಾಸಣೆ

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪತ್ತೆಗೆ ತಪಾಸಣೆ ವೇಗವನ್ನು ಹೆಚ್ಚಿಸಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 14,73,210 ಜನರ ಮಾದರಿಯನ್ನು ತಪಾಸಣೆಗೊಳಪಡಿಸಲಾಗಿದೆ. ದೇಶದಲ್ಲಿ ಈವರೆಗೂ 26,34,76,625 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

ದೇಶದಲ್ಲಿ 11.72 ಕೋಟಿ ಫಲಾನುಭವಿಗಳಿಗೆ ಲಸಿಕೆ

ದೇಶದಲ್ಲಿ 11.72 ಕೋಟಿ ಫಲಾನುಭವಿಗಳಿಗೆ ಲಸಿಕೆ

ದೇಶದಲ್ಲಿ ಈವರೆಗೂ 11,72,23,509 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ. ಈ ಪೈಕಿ 90,82,153 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 56,33,982 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,02,90,850 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 51,51,557 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 3,86,76,098 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 9,84,785 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ4,41,90,147 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 30,86,465 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಮೂರು ಮಾದರಿ ಕೊರೊನಾ ಲಸಿಕೆ ವಿತರಣೆ

ಮೂರು ಮಾದರಿ ಕೊರೊನಾ ಲಸಿಕೆ ವಿತರಣೆ

ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಇದರ ಮಧ್ಯೆ ಮಾಸ್ಕೋ, ರಷ್ಯಾದಲ್ಲಿ ಗಮಲೇಯ ನ್ಯಾಷನಲ್ ರಿಸರ್ಚ್ ಇನ್ಸ್ ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಅಭಿವೃದ್ಧಿಪಡಿಸಿದ ಸ್ಪುಟ್ನಿಕ್-ವಿ ಲಸಿಕೆ ವಿತರಿಸುವುದಕ್ಕೂ ಅನುಮೋದನೆ ನೀಡಲಾಗಿದೆ.

ವಿಶ್ವದಾದ್ಯಂತ ಕೊವಿಡ್-19 ಸೋಂಕಿತ ಪ್ರಕರಣ

ವಿಶ್ವದಾದ್ಯಂತ ಕೊವಿಡ್-19 ಸೋಂಕಿತ ಪ್ರಕರಣ

ವಿಶ್ವದಲ್ಲಿ ಒಂದೇ ದಿನ ಒಟ್ಟು 8,36,294 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಜಗತ್ತಿನಾದ್ಯಂತ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 13,96,65,916ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಮಹಾಮಾರಿಗೆ 13839 ಜನರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 29,98,843ಕ್ಕೆ ಏರಿಕೆಯಾಗಿದೆ. ಈವರೆಗೂ ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೊವಿಡ್-19 ಸೋಂಕಿಗೆ ನೀಡಿದ ಚಿಕಿತ್ಸೆಯಿಂದಾಗಿ ಒಟ್ಟು 11,87,52,504 ಸೋಂಕಿತರು ಗುಣಮುಖರಾಗಿದ್ದಾರೆ. ಈ ಪೈಕಿ 1,79,14,569 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+