ಬಿಜೆಪಿ- ಶಿಂಧೆ ಸರ್ಕಾರದಲ್ಲಿ ಅಸಮಾಧಾನದ ಬೆಂಕಿ: ಮೈತ್ರಿಕೂಟ ತೊರೆಯಲು ಮುಂದಾದ 22 ಶಾಸಕರು, 9 ಸಂಸದರು?
ಮುಂಬೈ, ಮೇ 30: ಮಹಾರಾಷ್ಟ್ರ ಸರ್ಕಾರದಲ್ಲಿ ಅಸಮಾಧಾನದ ಬೆಂಕಿ ಹೊತ್ತಿಕೊಂಡಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ 22 ಶಾಸಕರು ಮತ್ತು ಒಂಬತ್ತು ಲೋಕಸಭಾ ಸಂಸದರು ಭಾರತೀಯ ಜನತಾ ಪಕ್ಷದಿಂದ (ಬಿಜೆಪಿ) ಅತೃಪ್ತರಾಗಿದ್ದಾರೆ. ಅಸಾಮಾಧಾನಗೊಂಡವರು ಪಕ್ಷವನ್ನು ತೊರೆಯಲು ಬಯಸಿದ್ದಾರೆ ಎಂದು ಶಿವಸೇನಾ (ಯುಬಿಟಿ) ಪಕ್ಷದ ಮುಖವಾಣಿ ಸಾಮ್ನಾ ಹೇಳಿಕೊಂಡಿದೆ.
ಶಿವಸೇನೆ (ಯುಬಿಟಿ) ಸಂಸದ ವಿನಾಯಕ ರಾವುತ್ ಅವರು ಶಾಸಕರು ತಮ್ಮ ಪಕ್ಷದ ಸಂಪರ್ಕದಲ್ಲಿದ್ದಾರೆ ಮತ್ತು ಅವರ ಕ್ಷೇತ್ರಗಳಲ್ಲಿ ಯಾವುದೇ ಅಭಿವೃದ್ಧಿಯಾಗದ ಕಾರಣ ಶಿಂಧೆ ನೇತೃತ್ವದ ಪಕ್ಷವನ್ನು ತೊರೆಯಲು ಬಯಸಿದ್ದಾರೆ ಎಂದು ತಿಳಿಸಿದ್ದಾರೆ.

ಹಮ್ ಹಿ ಶಿವಸೇನೆ ಎಂಬ ಘೋಷಣೆಗಳನ್ನು ಕೂಗಿದ ಶಿವಸೇನೆಯ ಹಿರಿಯ ನಾಯಕ ಗಜಾನನ ಕೀರ್ತಿಕರ್ ಅವರು ಬಿಜೆಪಿಯ ವರ್ತನೆಯ ಬಗ್ಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಸಾಮ್ನಾ ಸೋಮವಾರ ಹೇಳಿದೆ.
ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ-ಶಿವಸೇನೆ ಮೈತ್ರಿಕೂಟದಲ್ಲಿ ಎಲ್ಲವೂ ಸರಿಯಿಲ್ಲ ಎಂದು ತಿಳಿಸಿದ ಕೀರ್ತಿಕರ್, ಬಿಜೆಪಿ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ನಾವು 13 ಸಂಸದರಿದ್ದೇವೆ. ನಾವೀಗ ಎನ್‌ಡಿಎ ಭಾಗವಾಗಿದ್ದೇವೆ ಮತ್ತು ನಮ್ಮ ಕ್ಷೇತ್ರಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಆದ್ಯತೆಯ ಆಧಾರದ ಮೇಲೆ ಪರಿಹರಿಸಲಾಗುವುದು ಎಂದು ನಾವು ನಿರೀಕ್ಷಿಸುತ್ತೇವೆ. ಆದರೆ ಅದು ಸಂಭವಿಸುತ್ತಿರುವುದನ್ನು ನಾವು ಕಾಣುತ್ತಿಲ್ಲ ಎಂದು ಹೇಳಿದ್ದಾರೆ.

ತಮ್ಮ ಪಕ್ಷವು ರಾಜ್ಯದಲ್ಲಿ 22 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಲು ಬಯಸುತ್ತದೆ ಎಂದು ಕೀರ್ತಿಕರ್ ಹೇಳಿಕೊಂಡಿದ್ದಾರೆ.
'ಸ್ವಾಭಿಮಾನ ಮತ್ತು ಗೌರವವನ್ನು ಹಣದಿಂದ ಖರೀದಿಸಲು ಸಾಧ್ಯವಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ತಮ್ಮ ಪಕ್ಷವು ರಾಜ್ಯದಲ್ಲಿ 22 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಲು ಬಯಸುತ್ತದೆ' ಎಂದು ಕೀರ್ತಿಕರ್ ಹೇಳಿಕೊಂಡಿದ್ದಾರೆ. ಅಂದರೆ, ಅವರು ಬಿಜೆಪಿಯಿಂದ ಸೀಟು ಕೇಳಿದ್ದಾರೆ. ಆದರೆ, ಈ ಗುಂಪಿಗೆ ಐದು-ಏಳು ಸ್ಥಾನಗಳನ್ನೂ ನೀಡಲು ಬಿಜೆಪಿ ಸಿದ್ಧವಿಲ್ಲ ಎಂದು ಸಾಮ್ನಾ ವರದಿ ಮಾಡಿದೆ.
ಶಿಂಧೆ ಬಣದ ಶಾಸಕರು ಉಸಿರುಗಟ್ಟಿದ್ದಾರೆ ಎಂದು ಸಚಿವ ಶಂಭುರಾಜ್ ದೇಸಾಯಿ ಅವರು 15 ದಿನಗಳ ಹಿಂದೆ ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರಿಗೆ ಸಂದೇಶವನ್ನು ರವಾನಿಸಿದ್ದರು ಎಂದು ರಾವತ್ ಹೇಳಿದ್ದಾರೆ.

ದೇಸಾಯಿ ಮಾತ್ರವಲ್ಲ, ತಾನಾಜಿ ಸಾವಂತ್ ಮತ್ತು ಗಜಾನನ್ ಕೀರ್ತಿಕರ್ ಕೂಡ ಹೇಗೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ ಎಂಬುದನ್ನು ನಾವು ನೋಡಿದ್ದೇವೆ ಎಂದು ರಾವತ್ ತಿಳಿಸಿದ್ದಾರೆ. ಪಕ್ಷದ ಮಿತ್ರ ಪಕ್ಷವಾದ ಬಿಜೆಪಿಯ ಲೋಕಸಭಾ ಚುನಾವಣಾ ಯೋಜನೆಗಳ ಬಗ್ಗೆ ಶಿಂಧೆ ನೇತೃತ್ವದ ಶಿವಸೇನೆಯು ಅಸಮಾಧಾನವನ್ನು ಹೊಂದಿದೆ ಎಂದು ಹೇಳಿದ್ದಾರೆ.
ಆದಾಗ್ಯೂ, ದೇಸಾಯಿ ಅವರು ಉದ್ಧವ್ ಅವರನ್ನು ಸಂಪರ್ಕಿಸಿರುವುದನ್ನು ನಿರಾಕರಿಸಿದ್ದಾರೆ. ರಾವುತ್ ಅವರು ಕ್ಷಮೆಯಾಚಿಸಲು ಒತ್ತಾಯಿಸಿದ್ದಾರೆ.
'ಇದೆಲ್ಲ ತಪ್ಪು ಮಾಹಿತಿ. ನಾನು ಠಾಕ್ರೆಗಳನ್ನು ಸಂಪರ್ಕಿಸಿಲ್ಲ ಅಥವಾ ಸಂವಹನ ನಡೆಸಿಲ್ಲ. ಕ್ಷಮೆ ಕೇಳಲು ರಾವುತ್‌ಗೆ ಎರಡು ದಿನಗಳ ಕಾಲಾವಕಾಶ ನೀಡುತ್ತಿದ್ದೇನೆ. ಇಲ್ಲದಿದ್ದರೆ ಅವರಿಗೆ ಮಾನನಷ್ಟ ನೋಟಿಸ್ ಕಳುಹಿಸುತ್ತೇನೆ' ಎಂದು ಸಚಿವರು ಹೇಳಿದ್ದಾರೆ.
-
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು











Click it and Unblock the Notifications