Breaking: ಭಾರತದಲ್ಲಿ 2,288 ಮಂದಿಗೆ ಕೋವಿಡ್ ಸೋಂಕು
ನವದೆಹಲಿ, ಮೇ 10: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ 4ನೇ ಅಲೆಯ ಬಗ್ಗೆ ಆತಂಕವಿಲ್ಲ ಎಂದು ಈಗಾಗಲೇ ವೈದ್ಯಕೀಯ ತಜ್ಞರು ಹೇಳಿದ್ದಾರೆ. ಇದರ ಮಧ್ಯೆ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರಿದಿದೆ.
ದೇಶದಲ್ಲಿ ಸೋಮವಾರ 3207 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವರದಿಯಾದ ಬೆನ್ನಲ್ಲೇ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಕಳೆದ 24 ಗಂಟೆಗಳಲ್ಲಿ 2288 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ.
ಕಳೆದ ಒಂದು ದಿನದಲ್ಲಿ ಕೊರೊನಾವೈರಸ್ ಸೋಂಕಿನಿಂದ 10 ಮಂದಿ ಪ್ರಾಣ ಬಿಟ್ಟಿದ್ದಾರೆ. 3044 ಕೋವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ.
ಸಕ್ರಿಯ ಪ್ರಕರಣಗಳು ; ಭಾರತದಲ್ಲಿ ಇದುವರೆಗೂ 4,25,63,9495 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರ ಶೇಕಡಾವಾರು ಪ್ರಮಾಣ ಶೇ.98.74ರಷ್ಟಿದೆ. ಅದೇ ರೀತಿ ಮಹಾಮಾರಿ ಕೋವಿಡ್-19 ಸೋಂಕಿಗೆ ದೇಶದಲ್ಲಿ ಇದುವರೆಗೂ 5,24,103 ಮಂದಿ ಪ್ರಾಣ ಬಿಟ್ಟಿದ್ದು, ಮೃತ ಪ್ರಮಾಣ ಶೇ.1.22ರಷ್ಟಿದೆ. ದೇಶದಲ್ಲಿ ಒಟ್ಟು ಕೊರೊನಾವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 19,637 ಆಗಿದೆ. ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.0.05ರಷ್ಟಿದೆ.

ಕೋವಿಡ್-19 ಲಸಿಕೆ ವಿತರಣೆಗೆ ವೇಗ ನೀಡಲಾಗುತ್ತಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲೇ 13,90,912 ಮಂದಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದ್ದು, ಈವರೆಗೂ 1,90,50,86,706 ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.












Click it and Unblock the Notifications