ದೇಶದಲ್ಲಿ 22,889 ಹೊಸ ಕೋವಿಡ್ ಪ್ರಕರಣ ಪತ್ತೆ
ನವದೆಹಲಿ, ಡಿಸೆಂಬರ್ 18: ದೇಶದಲ್ಲಿ ಗುರುವಾರ 22,889 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ ಎಂದು ಆರೋಗ್ಯ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ. ಇದರಿಂದ ದೇಶದಲ್ಲಿ ಇದುವರೆಗೂ ವರದಿಯಾದ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 99,79,447ಕ್ಕೆ ಏರಿಕೆಯಾಗಿದ್ದು, ಒಂದು ಕೋಟಿಯ ಗಡಿ ತಲುಪುವತ್ತ ಸಾಗಿದೆ.
ಕಳೆದ 24 ಗಂಟೆಗಳಲ್ಲಿ 338 ಮಂದಿ ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇದರಿಂದ ಒಟ್ಟು ಸಾವಿನ ಸಂಖ್ಯೆ 1,44,789ಕ್ಕೆ ತಲುಪಿದೆ. ಸಾವಿನ ಪ್ರಮಾಣ ಕೆಲವು ವಾರಗಳಿಂದ 300ರಿಂದ 400ರ ಗಡಿಯೊಳಗೆ ಇದೆ.
ವೈರಸ್‌ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳುತ್ತಿರುವವರ ಸಂಖ್ಯೆ ಕೂಡ ಗಮನಾರ್ಹ ಪ್ರಮಾಣದಲ್ಲಿ ಏರಿಕೆಯಾಗಿದೆ. ಗುರುವಾರ ಒಂದೇ ದಿನ 31,087 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು ಬಿಡುಗಡೆಯಾದವರ ಸಂಖ್ಯೆ 95,20,827ಕ್ಕೆ ತಲುಪಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 3,13,831ಕ್ಕೆ ಇಳಿಕೆಯಾಗಿದೆ.

ದೇಶದಲ್ಲಿ ಡಿ. 17ರವರೆಗೂ ಒಟ್ಟು 15,89,18,646 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಅದರಲ್ಲಿ ಗುರುವಾರ 11,13,406 ಮಾದರಿಗಳನ್ನು ಪರೀಕ್ಷಿಸಲಾಗಿದೆ.











Click it and Unblock the Notifications