ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

No Stocks: ಲಸಿಕೆ ಕೇಂದ್ರದ ಎದುರು ಈ ಬೋರ್ಡ್ ಹಾಕಲು ಕಾರಣವೇನು?

|
Google Oneindia Kannada News

ನವದೆಹಲಿ, ಏಪ್ರಿಲ್ 21: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಅಭಿಯಾನ ಆರಂಭವಾದ ಜನವರಿ ತಿಂಗಳಿನಿಂದ ಇಂದಿನವರೆಗೂ ಶೇ.23ರಷ್ಟು ಡೋಸ್ ಲಸಿಕೆಯನ್ನು ವ್ಯರ್ಥವಾಗಿ ಹಾಳು ಮಾಡಲಾಗಿದೆ ಎಂದು ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದ ವರದಿಯಿಂದ ತಿಳಿದು ಬಂದಿದೆ.

ತಮಿಳುನಾಡಿನಲ್ಲಿ ಅತಿಹೆಚ್ಚು ಕೊವಿಡ್-19 ಸೋಂಕಿನ ಲಸಿಕೆಯನ್ನು ವ್ಯರ್ಥ ಮಾಡಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ತಮಿಳುನಾಡಿನಲ್ಲಿ ಶೇ.12, ಹರಿಯಾಣ ಶೇ.9.74, ಪಂಜಾಬ್ ಶೇ.8.12 ಮಣಿಪುರ ಶೇ.7.8 ಮತ್ತು ತೆಲಂಗಾಣ ಶೇ.7.55ರಷ್ಟು ಲಸಿಕೆಯನ್ನು ವ್ಯರ್ಥವಾಗಿ ಖರ್ಚು ಮಾಡಲಾಗಿದೆ ಎಂದು ಆರ್ ಟಿಐ ಮಾಹಿತಿಯಲ್ಲಿ ಗೊತ್ತಾಗಿದೆ.

Infographics: ಕೊರೊನಾ ಎರಡನೇ ಅಲೆಗೂ ಮೊದಲೇ ಎಡವಿತಾ ಸರ್ಕಾರ?Infographics: ಕೊರೊನಾ ಎರಡನೇ ಅಲೆಗೂ ಮೊದಲೇ ಎಡವಿತಾ ಸರ್ಕಾರ?

ಭಾರತದಲ್ಲಿ ಜನವರಿ 16ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೊರೊನಾವೈರಸ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು. ಅಂದಿನಿಂದ ಏಪ್ರಿಲ್ 11ರವರೆಗೂ ನೀಡಿರುವ 10 ಕೋಟಿ ಡೋಸ್ ಲಸಿಕೆಗಳ ಪೈಕಿ 44 ಲಕ್ಷ ಡೋಸ್ ಲಸಿಕೆ ವ್ಯರ್ಥವಾಗಿದೆ.

ಕೊರೊನಾ ಲಸಿಕೆ ವಿಷಯದಲ್ಲಿ ಜಟಾಪಟಿ

ಕೊರೊನಾ ಲಸಿಕೆ ವಿಷಯದಲ್ಲಿ ಜಟಾಪಟಿ

ಕೊರೊನಾವೈರಸ್ ಲಸಿಕೆ ವಿತರಣೆ ವಿಚಾರ ಕೇಂದ್ರ ಸರ್ಕಾರ ಮತ್ತು ಕೆಲವು ರಾಜ್ಯ ಸರ್ಕಾರಗಳ ನಡುವೆ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಬಿಜೆಪಿ ಆಡಳಿತವಿರುವ ಗುಜರಾತ್ ರೀತಿ ರಾಜ್ಯಗಳು ಕಡಿಮೆ ಜನಸಂಖ್ಯೆ ಹೊಂದಿದ್ದರೂ ಈ ರಾಜ್ಯಕ್ಕೆ ನೀಡಿದ್ದಲ್ಲಿ ಲಸಿಕೆಯನ್ನು ಕೇಂದ್ರ ಸರ್ಕಾರವು ನಮ್ಮ ರಾಜ್ಯಕ್ಕೆ ನೀಡಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ. ಮಹಾರಾಷ್ಟ್ರ, ಪಂಜಾಬ್, ದೆಹಲಿ ಸರ್ಕಾರಗಳು ಕೇಂದ್ರದ ವಿರುದ್ಧ ಕಿಡಿ ಕಾರುತ್ತಿವೆ.

ಭಾರತೀಯ ಲಸಿಕೆ ಉತ್ಪಾದಕರಿಗೆ 4500 ಕೋಟಿ ರೂ.

ಭಾರತೀಯ ಲಸಿಕೆ ಉತ್ಪಾದಕರಿಗೆ 4500 ಕೋಟಿ ರೂ.

ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ವಿದೇಶಗಳಲ್ಲಿ ಅನುಮೋದನೆ ಪಡೆದ ಲಸಿಕೆಗಳನ್ನು ಆಮದು ಮಾಡಿಕೊಳ್ಳುವುದಕ್ಕೆ ಕ್ರಮ ತೆಗದುಕೊಳ್ಳಲಾಗಿದೆ. ಇದರ ಜೊತೆಗೆ ಭಾರತದಲ್ಲಿ ಲಸಿಕೆ ಉತ್ಪಾದಿಸುತ್ತಿರುವ ಕಂಪನಿಗಳಿಗೆ ಕೇಂದ್ರ ಸರ್ಕಾರದಿಂದ 4500 ಕೋಟಿ ರೂಪಾಯಿ ಅನುದಾನವನ್ನು ನೀಡಲಾಗುವುದು. ಸೇರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾಗೆ 3000 ಕೋಟಿ ಹಾಗೂ ಭಾರತ್ ಬಯೋಟೆಕ್ ಸಂಸ್ಥೆಗೆ 1500 ಕೋಟಿ ರೂಪಾಯಿ ನೀಡಲಾಗುವುದು ಎಂದು ಏಪ್ರಿಲ್ 20ರಂದು ಕೇಂದ್ರ ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ.

ಭಾರತದಲ್ಲಿ ಮೂರು ಮಾದರಿ ಲಸಿಕೆ ವಿತರಣೆ

ಭಾರತದಲ್ಲಿ ಮೂರು ಮಾದರಿ ಲಸಿಕೆ ವಿತರಣೆ

ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಇದರ ಮಧ್ಯೆ ಮಾಸ್ಕೋ, ರಷ್ಯಾದಲ್ಲಿ ಗಮಲೇಯ ನ್ಯಾಷನಲ್ ರಿಸರ್ಚ್ ಇನ್ಸ್ ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಅಭಿವೃದ್ಧಿಪಡಿಸಿದ ಸ್ಪುಟ್ನಿಕ್-ವಿ ಲಸಿಕೆ ವಿತರಿಸುವುದಕ್ಕೂ ಅನುಮೋದನೆ ನೀಡಲಾಗಿದೆ.

95 ದಿನಗಳಲ್ಲಿ 13 ಕೋಟಿ ಫಲಾನುಭವಿಗಳಿಗೆ ಲಸಿಕೆ

95 ದಿನಗಳಲ್ಲಿ 13 ಕೋಟಿ ಫಲಾನುಭವಿಗಳಿಗೆ ಲಸಿಕೆ

ದೇಶದಲ್ಲಿ 95 ದಿನಗಳಲ್ಲಿ 13,01,19,310 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ 92,01,040 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 58,16,538 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,15,59,218 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 58,52,669 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 4,34,85,752 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 14,90,460 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 4,73,31,326 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 52,90,367 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

English summary
23 Percent Of Covid Vaccine Wasted By States Till April 11 In India: RTI Report.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X