ಭಾರತದಲ್ಲಿ 24,712 ಹೊಸ ಕೊರೊನಾ ಪ್ರಕರಣಗಳು ಪತ್ತೆ

ನವದೆಹಲಿ, ಡಿಸೆಂಬರ್ 24: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 24,712 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ಒಟ್ಟು ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ 1,01,23,778 ಕ್ಕೆ ತಲುಪಿದೆ. ಒಂದೇ ದಿನ 312 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಜೊತೆಗೆ ಬರೋಬ್ಬರಿ 29,791 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ 1,46,756ಕ್ಕೆ ಏರಿಕೆಯಾಗಿದೆ. ಹಾಗೆಯೇ ಒಟ್ಟು ಚೇತರಿಕೆ 96,93,173 ಕ್ಕೆ ತಲುಪಿದೆ. ಪಾಸಿಟಿವ್ ಆದ ಪ್ರಕರಣಗಳ ಪೈಕಿ 2,83,849 ಸಕ್ರಿಯ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಸಚಿವಾಲಯದ ವರದಿ ತಿಳಿಸಿದೆ.

ಬ್ರಿಟನ್‌ನಲ್ಲಿ ಹೊಸ ಕೊರೊನಾವೈರಸ್ ಪತ್ತೆಯಾಗಿರುವುದರಿಂದ ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಕಡ್ಡಾಯವಾಗಿ ಆರ್‌ಟಿ-ಪಿಸಿಆರ್‌ ಪರೀಕ್ಷೆ ನಡೆಸಬೇಕು ಎಂದು ಆರೋಗ್ಯ ಇಲಾಖೆಯು ಸೂಚನೆ ನೀಡಿದೆ. ಈಗಾಗಲೇ ಬ್ರಿಟನ್‌ನಿಂದ ಬಂದ ಹಲವರಲ್ಲಿ ಕೊರೊನಾವೈರಸ್ ಸೋಂಕು ಪತ್ತೆಯಾಗಿದೆ.

24,712 New Coronavirus Cases, 313 Deaths Reported In India in last 24 hours

ಇದರ ನಡುವೆ ಕೊರೊನಾವೈರಸ್ ಸೋಂಕಿಗೆ ದೇಶೀಯವಾಗಿ ಅಭೀವೃದ್ಧಿಪಡಿಸುವ ಲಸಿಕೆಗಳು ಆರು ತಿಂಗಳಿನಿಂದ ಒಂದು ವರ್ಷದವರೆಗೆ ಪರಿಣಾಮಕಾರಿಯಾಗಬಹುದು ಎಂದು ಭಾರತ್ ಬಯೋಟೆಕ್‌ನ ಕೋವಿಡ್-19ನ ಎರಡನೇ ಹಂತದ ಮಧ್ಯಂತರ ಸಂಶೋಧನಾ ವರದಿಗಳು ತಿಳಿಸಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+