ಬಿಹಾರದ ಛಾಪ್ರಾದಲ್ಲಿ ನಕಲಿ ಮದ್ಯ ಸೇವಿಸಿ 24 ಮಂದಿ ಸಾವು
ಪಾಟ್ನಾ, ಡಿಸೆಂಬರ್ 14: ಬಿಹಾರದ ಸರನ್ ಜಿಲ್ಲೆಯ ಛಾಪ್ರಾ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ವಿಷಕಾರಿ ಮದ್ಯ ಸೇವಿಸಿ ಕನಿಷ್ಠ 24 ಜನರು ಸಾವನ್ನಪ್ಪಿದ್ದಾರೆ. ಇನ್ನು ಕೆಲವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತಪಟ್ಟವರ ಸಾವಿಗೆ ಕಾರಣ ತಿಳಿಯಲು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗುವುದು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ವಿಷಕಾರಿ ಮದ್ಯ ಸೇವನೆಯಿಂದ ಸಾವುಗಳು ಸಂಭವಿಸಿವೆ ಎಂದು ಸಂತ್ರಸ್ತರ ಸಂಬಂಧಿಕರು ಹೇಳಿದ್ದಾರೆ. ಆದರೆ, ಅಧಿಕಾರಿಗಳು ಇದನ್ನು ಖಚಿತಪಡಿಸಿಲ್ಲ.

ಇದೆಲ್ಲದರ ನಡುವೆ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಇಂದು ಬಿಹಾರ ವಿಧಾನಸಭೆಯಲ್ಲಿ ಪ್ರತಿಭಟನೆಯನ್ನು ಎದುರಿಸಿದರು. ಮದ್ಯ ಸೇವನೆಯಿಂದ ಸಾವುಗಳು ಸಂಭವಿಸಿರುವುದಕ್ಕೆ ಬಿಜೆಪಿ ಪ್ರತಿಭಟನೆ ನಡೆಸಿತು.
2016ರಿಂದ ರಾಜ್ಯದಲ್ಲಿ ಮದ್ಯ ನಿಷೇಧವಿದೆ. ಈ ನೀತಿಯನ್ನು ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ಶಾಸಕ ವಿಜಯ್ ಕುಮಾರ್ ಸಿನ್ಹಾ ಪ್ರಶ್ನಿಸಿದರು. ಜನತಾ ದಳ-ಸಂಯುಕ್ತ ಪಕ್ಷದ ಮುಖಂಡರು ಬಿಜೆಪಿ ನಾಯಕರ ವಿರುದ್ಧ ಪ್ರತಿಭಟನೆ ನಡೆಸಿದರು. ಸಾರಾಯಿ ಕುಡಿದು ಸಾವನ್ನಪ್ಪಿದವರ ವಿಚಾರವನ್ನು ಪ್ರಸ್ತಾಪಿಸಿ ಬಿಜೆಪಿ ವಿರುದ್ಧ ಪ್ರತಿಭಟಿಸಿದರು. ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡರು.
ಇದಕ್ಕೆ ಕೋಪಗೊಂಡ ನಿತೀಶ್ ಕುಮಾರ್ ಅವರು ಪ್ರತಿಪಕ್ಷ ಬಿಜೆಪಿ ನಾಯಕರ ಮೇಲೆ 'ಶರಬಿ ಹೋ ತುಮ್ (ನೀವು ಕುಡಿದಿದ್ದೀರಿ)' ಎಂದು ಕಿರುಚುತ್ತಿದ್ದರು.

ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರವೇ ಸಾವಿಗಳಿಗೆ ಕಾರಣವೆಂದು ಸ್ಥಳೀಯ ಬಿಜೆಪಿ ಶಾಸಕ ಜನಕ್ ಸಿಂಗ್ ಆರೋಪಿಸಿದ್ದಾರೆ. ಅವರ ಗ್ರಾಮದಲ್ಲಿ ಕನಿಷ್ಠ ಮೂರು ಸಾವುಗಳು ಸಂಭವಿಸಿವೆ.
'ರಾಜ್ಯದಲ್ಲಿ (ವಿಷಕಾರಿ ಮದ್ಯದಿಂದಾಗಿ) ಸಾವಿರಾರು ಜನರು ಸಾಯುತ್ತಿದ್ದಾರೆ. ಆದರೆ, ಮುಖ್ಯಮಂತ್ರಿ ಅದರ ಬಗ್ಗೆ ಏನೂ ಕ್ರಮ ಕೈಗೊಂಡಿಲ್ಲ. ಇದಕ್ಕೆ ಸರ್ಕಾರದ ಚುಕ್ಕಾಣಿ ಹಿಡಿದವರನ್ನು ದೂಷಿಸಬೇಕು. ಏಕೆಂದರೆ ಇಂತಹ ಘಟನೆಗಳು ನಡೆದರೆ ಅಧಿಕಾರಿಗಳ ತನಿಖೆ ಮಾಡಲಾಗುವುದು ಎಂಬುದಾಗಿ ಅವರು ಹೇಳಿದ್ದಾರೆ' ಎಂದು ಜನಕ್ ಸಿಂಗ್ ಹೇಳಿದ್ದಾರೆ.
ಏಪ್ರಿಲ್ 2016 ರಲ್ಲಿ ನಿತೀಶ್ ಕುಮಾರ್ ಸರ್ಕಾರವು ಬಿಹಾರದಲ್ಲಿ ಮದ್ಯ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಿದೆ.












Click it and Unblock the Notifications