ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತ್ ಜೋಡೋ ಯಾತ್ರೆ ಸಮಾರೋಪಕ್ಕೆ 24 ಪಕ್ಷಗಳಿಗೆ ಆಹ್ವಾನ ನೀಡಿದ ಮಲ್ಲಿಕಾರ್ಜುನ ಖರ್ಗೆ

|
Google Oneindia Kannada News

ನವದೆಹಲಿ, ಜ. 11: ಕಳೆದ ಸೆಪ್ಟಂಬರ್ ತಿಂಗಳಿನಿಂದ ನಡೆಯುತ್ತಿರುವ ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ಈ ತಿಂಗಳು ಮುಕ್ತಾಯವಾಗಲಿದೆ. ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.

ಜನವರಿ 30 ರಂದು ಶ್ರೀನಗರದಲ್ಲಿ ನಡೆಯಲಿರುವ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಸಮಾರೋಪದಲ್ಲಿ ಪಾಲ್ಗೊಳ್ಳಲು 24 ಪಕ್ಷಗಳಿಗೆ ಕಾಂಗ್ರೆಸ್ ಆಹ್ವಾನ ನೀಡಿದೆ.

ರಾಮ ಮಂದಿರ ಉದ್ಘಾಟನೆ ಘೋಷಣೆ ಮಾಡಲು ನೀವು ಪೂಜಾರಿಯಲ್ಲ: ಅಮಿತ್ ಶಾ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿರಾಮ ಮಂದಿರ ಉದ್ಘಾಟನೆ ಘೋಷಣೆ ಮಾಡಲು ನೀವು ಪೂಜಾರಿಯಲ್ಲ: ಅಮಿತ್ ಶಾ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಈ ಭಾರತ್ ಜೋಡೋ ಯಾತ್ರೆಯ ಸಂದೇಶವನ್ನು ಬಲಪಡಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ 24 ಪಕ್ಷಗಳಿಗೆ ಪತ್ರ ಬರೆದಿದ್ದಾರೆ.

24 Parties Invited To Join Rahul Gandhis Yatra In Srinagar

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಜಿ ಅವರು 24 ಸಮಾನ ಮನಸ್ಕ ಪಕ್ಷಗಳ ಅಧ್ಯಕ್ಷರಿಗೆ ಪತ್ರ ಬರೆದು ಜನವರಿ 30 ರಂದು ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಆಹ್ವಾನಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಸಾಮರಸ್ಯ ಮತ್ತು ಸಮಾನತೆಯ ಸಂದೇಶವನ್ನು "ಬಲಪಡಿಸಲು" ಜನವರಿ 30 ರಂದು ಶ್ರೀನಗರದಲ್ಲಿ ತನ್ನ ಭಾರತ್ ಜೋಡೋ ಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಬುಧವಾರ ಸಂಜೆ 24 ಸಮಾನ ಮನಸ್ಕ ಪಕ್ಷಗಳ ಅಧ್ಯಕ್ಷರಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಹ್ವಾನ ಕಳುಹಿಸಿದ್ದಾರೆ.

"ಈ ಸಮಾರಂಭದಲ್ಲಿ, ನಾವು ದ್ವೇಷ ಮತ್ತು ಹಿಂಸೆಯ ವಿರುದ್ಧ ಹೋರಾಡಲು, ಸತ್ಯ, ಕರುಣೆ ಮತ್ತು ಅಹಿಂಸೆಯ ಸಂದೇಶವನ್ನು ಹರಡಲು ಮತ್ತು ಎಲ್ಲರಿಗೂ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಮತ್ತು ನ್ಯಾಯದ ಸಾಂವಿಧಾನಿಕ ಮೌಲ್ಯಗಳನ್ನು ರಕ್ಷಿಸಲು ಬದ್ಧರಾಗಿದ್ದೇವೆ" ಎಂದು ಪತ್ರದಲ್ಲಿ ಬರೆಯಲಾಗಿದೆ.

24 Parties Invited To Join Rahul Gandhis Yatra In Srinagar

"ನಿಮ್ಮ ಸಕಾರಾತ್ಮಕ ಪ್ರತಿಕ್ರಿಯೆಗಾಗಿ ಮತ್ತು ಶ್ರೀನಗರದಲ್ಲಿ ನಿಮ್ಮನ್ನು ಭೇಟಿಯಾಗಲು ನಾನು ಎದುರು ನೋಡುತ್ತಿದ್ದೇನೆ" ಎಂದು ಮಲ್ಲಿಕಾರ್ಜುನ ಖರ್ಗೆ ಪತ್ರದಲ್ಲಿ ಬರೆದಿದ್ದಾರೆ.

ಜನವರಿ 30 ರ ಹುತಾತ್ಮರ ದಿನದಂದು, "ದ್ವೇಷ ಮತ್ತು ಹಿಂಸೆಯ ಸಿದ್ಧಾಂತದ ವಿರುದ್ಧ ದಣಿವರಿಯದ ಹೋರಾಟದಲ್ಲಿ ಈ ದಿನ ತನ್ನ ಪ್ರಾಣವನ್ನು ಕಳೆದುಕೊಂಡ ಮಹಾತ್ಮರ ಸ್ಮರಣೆಗೆ ಈ ಕಾರ್ಯವನ್ನು ಅರ್ಪಿಸಿದೆ" ಎಂದು ಕಾಂಗ್ರೆಸ್ ಹೇಳಿದೆ.

ಮಲ್ಲಿಕಾರ್ಜುನ ಖರ್ಗೆ ಅವರ ಪತ್ರವನ್ನು ಪಕ್ಷದ ಹಿರಿಯ ನಾಯಕ ಮತ್ತು ಅದರ ಸಂವಹನ ಮುಖ್ಯಸ್ಥ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.

English summary
Congress chief Mallikarjun Kharge has written to 24 parties inviting them to the close of Rahul Gandhi's Bharat Jodo Yatra in Srinagar. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X