ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೆಇಇ ಫಲಿತಾಂಶ: 24 ವಿದ್ಯಾರ್ಥಿಗಳಿಗೆ ಶೇ.100ರಷ್ಟು ಅಂಕ

|
Google Oneindia Kannada News

ನವದೆಹಲಿ, ಏಪ್ರಿಲ್ 30: ಐಐಟಿಗಳಿಗೆ ಪ್ರವೇಶ ಕಲ್ಪಿಸುವ 2019ನೇ ಸಾಲಿನ ಜೆಇಇ ಮೈನ್ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, 24 ವಿದ್ಯಾರ್ಥಿಗಳು ಶೇ.100ರಷ್ಟು ಅಂಕ ಗಳಿಸಿದ್ದಾರೆ.

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆಇಇ ಮೈನ್ ಪರೀಕ್ಷೆಯಲ್ಲಿ 11 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಾಮಾನ್ಯ ರ‍್ಯಾಂಕ್ ಲಿಸ್ಟ್ ಕಟ್ ಆಫ್ 89.75 ಆಗಿತ್ತು. ಅದರಲ್ಲಿ 2.24 ಲಕ್ಷ ವಿದ್ಯಾರ್ಥಿಗಳು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ನಡೆಸುವ ಪ್ರವೇಶ ಪರೀಕ್ಷೆಯನ್ನು ಬರೆಯಲಿದ್ದಾರೆ.

ಇದೇ ಮೊದಲ ಬಾರಿಗೆ ಜೆಇಇ ಪರೀಕ್ಷೆಯನ್ನು ಸಂಪೂರ್ಣವಾಗಿ ಡಿಜಿಟಲೀಕರಣ ಮಾಡಲಾಗಿತ್ತು. ಮೊದಲ ಬಾರಿಗೆ ವರ್ಷದಲ್ಲಿ ಎರಡು ಬಾರಿ ಪರೀಕ್ಷೆ ನಡೆಸಲಾಯಿತು. ಒಂದು ಪರೀಕ್ಷೆ ಜನವರಿಯಲ್ಲಿ ನಡೆದರೆ ಇನ್ನೊಂದು ಪರೀಕ್ಷೆ ಏಪ್ರಿಲ್‌ನಲ್ಲಿ ನಡೆಯಿತು.

24 students achieve perfect 100 scores in JEE Main

ಜೆ ಇ ಇ ಪರೀಕ್ಷೆಗಳು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ, ಭಾರತ ಸರ್ಕಾರ ಮತ್ತು ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (ಸಿ ಬಿ ಎಸ್ ಇ ), ನವದೆಹಲಿ, ಸಹಯೋಗದೊಂದಿಗೆ ಆಯೋಜಿಸುವ ಜಂಟಿ ಪ್ರವೇಶ ಪರೀಕ್ಷೆ.

ವೃತ್ತಿಪರ ಕೋರ್ಸುಗಳಿಗೆ ಸೇರುವ ವಿದ್ಯಾರ್ಥಿಗಳಲ್ಲಿ ಒತ್ತಡ ಕಡಿಮೆಮಾಡಲು ಹಾಗು ತಾಂತ್ರಿಕ ಕ್ಷೇತ್ರದಲ್ಲಿ ಉನ್ನತ ಮಟ್ಟದ ಸಾಧನೆ ಮಾಡಲು ಬಯಸುವವರಿಗೆ ಜೆ ಇ ಇ ಪರೀಕ್ಷೆಗಳು ಸಹಕಾರಿಯಾಗಿವೆ.

ಜೆ.ಇ.ಇ. ಪರೀಕ್ಷೆಗಳು ರಾಷ್ಟ್ರ ಮಟ್ಟದ ತಾಂತ್ರಿಕ ವಿದ್ಯಾಸಂಸ್ಥೆಗಳಿಗೆ ಪ್ರವೇಶವನ್ನು ಪಡೆಯಲು ತೆಗೆದುಕೊಳ್ಳಬೇಕಾದಂಥವು. ಐ.ಐ.ಟಿ., ಎನ್.ಐ.ಟಿ., ಐ.ಎಸ್.ಇ.ಆರ್., ಮುಂತಾದ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಶುದ್ಧ ವಿಜ್ಞಾನವನ್ನೋ ಅಥವಾ ಅನ್ವಯ ವಿಜ್ಞಾನವನ್ನೋ ಅಧ್ಯಯನ ಮಾಡಲು ಜೆ.ಇ.ಇ. ಪರೀಕ್ಷೆಯಲ್ಲಿ ಉತ್ತಮ ರ‍್ಯಾಂಕ್ ಪಡೆಯಬೇಕು. ಜೆ.ಇ.ಇ. ಆಯ್ಕೆ ಪರೀಕ್ಷೆಗಳು ತಮ್ಮದೇ ಆದ ಪಠ್ಯವನ್ನು ಆಧರಿಸಿರುತ್ತವೆ.

English summary
The wait is over for more than 11.4 lakh students who attempted the JEE Main this year. The National Testing Agency has released the results for the April edition of the examination, and declared a common rank list cut-off of 89.75 percentile for eligibility for the JEE Advanced 2019 examination.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X