ಇಂದು 33,291 ಕೋವಿಡ್ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆ

ನವದೆಹಲಿ, ಡಿಸೆಂಬರ್ 17: ಭಾರತದಲ್ಲಿ 24 ಗಂಟೆಗಳಲ್ಲಿ 24,010 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಬುಧವಾರದಿಂದ ಗುರುವಾರ ಬೆಳಗಿನವರೆಗೆ 355 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ವರದಿ ತಿಳಿಸಿದೆ.

ಇದರಿಂದ ದೇಶದಲ್ಲಿ ಇದುವರೆಗೂ ದಾಖಲಾದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 99,56,558ಕ್ಕೆ ತಲುಪಿದೆ. ಇಂದು 33,291 ಮಂದಿ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು 94,89,740 ಮಂದಿ ಬಿಡುಗಡೆಯಾಗಿದ್ದಾರೆ. ಜತೆಗೆ ಸೋಂಕಿತರ ಸಾವಿನ ಸಂಖ್ಯೆ 1,44,451ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳಲ್ಲಿ ಗಮನಾರ್ಹ ಇಳಿಕೆಯಾಗುತ್ತಿದ್ದು, ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 3,22,366ಕ್ಕೆ ತಗ್ಗಿದೆ.

ದೇಶದಲ್ಲಿ ಮೊದಲ ದಿನದಿಂದ ಡಿ. 16ರವರೆಗೂ 15,78,05,240 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಇದರಲ್ಲಿ ಬುಧವಾರ ಒಂದೇ ದಿನ 11,58,960 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.

24,010 New Coronavirus Cases, 355 Deaths Recorded In India

ಭಾರತದಲ್ಲಿ ಮಂಗಳವಾರ 26,382 ಹೊಸ ಪ್ರಕರಣಗಳು ಪತ್ತೆಯಾಗಿದ್ದವು. 387 ಮಂದಿ ಕೊರೊನಾ ವೈರಸ್‌ನಿಂದ ಮೃತಪಟ್ಟಿದ್ದರು. 33,813 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+