ಭಾರತದಲ್ಲಿ ಪ್ರತಿನಿತ್ಯ ಆತಂಕ ಹೆಚ್ಚಿಸುತ್ತಿರುವ ಕೊರೊನಾವೈರಸ್
ನವದೆಹಲಿ, ಮಾರ್ಚ್ 16: ಭಾರತದಲ್ಲಿ ಪ್ರತಿನಿತ್ಯ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 20 ಸಾವಿರದ ಗಡಿ ದಾಟುತ್ತಿದೆ. ಕಳೆದ 24 ಗಂಟೆಗಳಲ್ಲಿ 24492 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ದೇಶದಲ್ಲಿ ಒಂದೇ ದಿನ ಕೊರೊನಾವೈರಸ್ ಮಹಾಮಾರಿಗೆ 131 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 1,58,856ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಮಂಗಳವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು 1,14,09,831 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. 24 ಗಂಟೆಗಳಲ್ಲಿ 20,191 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರ ಸಂಖ್ಯೆ 1,10,27,543 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 2,23,432 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ.

ಕೊರೊನಾವೈರಸ್ ಸೋಂಕಿಗೆ ಲಸಿಕೆ:
ದೇಶದಲ್ಲಿ ಈವರೆಗೂ 3,29,47,432 ಮಂದಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ. ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ.
ಜಗತ್ತಿನಲ್ಲಿ ಕೊರೊನಾವೈರಸ್ ಅಂಕಿ-ಸಂಖ್ಯೆ:
ವಿಶ್ವದಲ್ಲಿ ಒಂದೇ ದಿನ ಒಟ್ಟು 3,34,164 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಜಗತ್ತಿನಾದ್ಯಂತ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 12,07,62,230ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಮಹಾಮಾರಿಗೆ 6516 ಜನರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 26,71,721ಕ್ಕೆ ಏರಿಕೆಯಾಗಿದೆ. ಇದುವರೆಗೂ ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೊವಿಡ್-19 ಸೋಂಕಿಗೆ ನೀಡಿದ ಚಿಕಿತ್ಸೆಯಿಂದಾಗಿ ಒಟ್ಟು 9,74,04,509 ಸೋಂಕಿತರು ಗುಣಮುಖರಾಗಿದ್ದಾರೆ. ಈ ಪೈಕಿ 2,06,86,000 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ.












Click it and Unblock the Notifications