ಭಾರತದಲ್ಲಿ ಒಂದೇ ದಿನ 2,47,417 ಮಂದಿಗೆ ಕೊರೊನಾವೈರಸ್

ನವದೆಹಲಿ, ಜನವರಿ 13: ಭಾರತದಲ್ಲಿ ಕೊರೊನಾವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಹಾವಳಿ ಮಧ್ಯೆ ದೈನಂದಿನ ಪ್ರಕರಣಗಳ ಸಂಖ್ಯೆ 2 ಲಕ್ಷದ ಗಡಿ ದಾಟಿದೆ. ಬುಧವಾರಕ್ಕೆ ಹೋಲಿಸಿದರೆ ಗುರುವಾರ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಶೇ.27ರಷ್ಟು ಹೆಚ್ಚಾಗಿದೆ.

ಕಳೆದ 24 ಗಂಟೆಗಳಲ್ಲಿ 2,47,417 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ದೇಶದಲ್ಲಿ ಕೊವಿಡ್-19 ಪಾಸಿಟಿವಿಟಿ ದರ ಶೇಕಡಾ 10.64ರಷ್ಟಾಗಿದೆ. ದೇಶದಲ್ಲಿ ಒಂದೇ ದಿನ 84,825 ಮಂದಿ ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇದೇ ಅವಧಿಯಲ್ಲಿ 380 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದಾರೆ.

ಗುರುವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಈವರೆಗೂ ಒಟ್ಟು 34715361 ಸೋಂಕಿತರು ಗುಣಮುಖರಾಗಿದ್ದಾರೆ. ಕೊರೊನಾವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 11,17,531ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ದೇಶದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆಗೆ ಕಾರಣವಾಗಿರುವ ಓಮಿಕ್ರಾನ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲೂ ಭಾರಿ ಏರಿಕೆಯಾಗಿದೆ. ಒಟ್ಟು ಓಮಿಕ್ರಾನ್ ಸೋಂಕಿತ ಪ್ರಕರಣಗಳ ಸಂಖ್ಯೆಯು 5,488ಕ್ಕೆ ಏರಿಕೆಯಾಗಿದೆ.

247417 New Coronavirus Cases Reported in India; Daily positivity rate 13.11

ಕೊರೊನಾವೈರಸ್ ಸೋಂಕಿನ ಪರೀಕ್ಷೆ:

ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 18,86,935 ಜನರಿಗೆ ಕೊವಿಡ್-19 ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ದೇಶದಲ್ಲಿ ಈವರೆಗೂ 69,73,11,627 ಜನರಿಗೆ ಕೊರೊನಾವೈರಸ್ ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ:

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಗುರಿಯನ್ನಿಟ್ಟುಕೊಂಡು ವೇಗದಲ್ಲಿ ಲಸಿಕೆ ವಿತರಣೆ ಮಾಡಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 76,32,024 ಮಂದಿಗೆ ಲಸಿಕೆಯನ್ನು ವಿತರಿಸಲಾಗಿದೆ. ದೇಶದಲ್ಲಿ ಈವರೆಗೂ 1,54,61,39,465 ಡೋಸ್ ಲಸಿಕೆಯನ್ನು ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+