ಗುಜರಾತ್ ನಲ್ಲಿ ಪ್ರವಾಹ: 25 ಸಾವಿರಕ್ಕೂ ಅಧಿಕ ಮಂದಿ ರಕ್ಷಣೆ
ಅಹಮದಾಬಾದ್, ಜುಲೈ 25 : ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉತ್ತರ ಗುಜರಾತ್ ನಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಗುಜರಾತ್ ನ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಪ್ರವಾಹದ ಸ್ಥಿತಿ ಉಂಟಾಗಿದ್ದು, ಸೋಮವಾರ ರಾತ್ರಿ 25 ಸಾವಿರಕ್ಕೂ ಹೆಚ್ಚಿನ ಜನರನ್ನು ಇಲ್ಲಿಂದ ಬೇರೆಡೆಗೆ ಸ್ಥಳಾಂತರಿಸಲಾಗಿದೆ.

ಗುಜರಾತ್ ನಲ್ಲಿ ಮುಂಗಾರು ಆರಂಭವಾದಾಗಿನಿಂದ ಸುಮಾರು 70 ಜನ ಮಳೆಯಿಂದಾಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದ್ದು, 20ಕ್ಕೂ ಹೆಚ್ಚು ಹೆದ್ದಾರಿಗಳು ಜಲಾವೃತವಾಗಿವೆ.
ರಕ್ಷಣಾ ಕಾರ್ಯಾಚರಣೆಗೆ 25ಕ್ಕೂ ಹೆಚ್ಚು ಸೇನಾ ಹೆಲಿಕಾಪ್ಟರ್ ಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದ್ದು, ತಾತ್ಕಾಲಿಕ ಶಿಬಿರಗಳಲ್ಲಿ ಸಂತ್ರಸ್ತರಿಗೆ ಊಟದ ಪ್ಯಾಕೆಟ್ ಗಳನ್ನ ನೀಡಲಾಗುತ್ತಿದೆ.
ವಾಯುಪಡೆ ಹಾಗೂ ಸೇನಾ ಪಡೆಗಳು ರಕ್ಷಣಾ ಕಾರ್ಯಾಚರಣೆ ಮುಂದುವರೆಸಿವೆ.












Click it and Unblock the Notifications