• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಉತ್ತರಾಖಂಡದಲ್ಲಿ ಪ್ರಪಾತಕ್ಕೆ ಬಿದ್ದ ಬಸ್ ಮದುವೆ ಬಸ್; 25 ಸಾವು

|
Google Oneindia Kannada News

ಡೆಹ್ರಾಡೂನ್, ಅ.05: ಉತ್ತರಾಖಂಡ್‌ನ ಪೌರಿ ಗಡ್ವಾಲ್‌ನಲ್ಲಿ ಕಳೆದ ರಾತ್ರಿ 40 ಕ್ಕೂ ಹೆಚ್ಚು ಜನರಿದ್ದ ಮದುವೆಗೆ ಹೊರಟಿದ್ದವರನ್ನು ಕರೆದುಕೊಂಡು ಸಾಗುತ್ತಿದ್ದ ಬಸ್ ಕಮರಿಗೆ ಬಿದ್ದ ಪರಿಣಾಮ 25 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸಿಮ್ಡಿ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿ ರಾಜ್ಯ ವಿಪತ್ತು ಸ್ಪಂದನಾ ಪಡೆ ಮತ್ತು ಪೊಲೀಸರು ಇಡೀ ರಾತ್ರಿ ಕಾರ್ಯಾಚರಣೆ ನಡೆಸಿದ ನಂತರ ಒಟ್ಟು 21 ಪ್ರಯಾಣಿಕರನ್ನು ರಕ್ಷಿಸಿದ್ದಾರೆ.

ಉತ್ತರಾಖಂಡದಲ್ಲಿ ಹಿಮಕುಸಿತ: 10 ಸಾವು- ಸಿಲುಕಿಕೊಂಡವರ ಪತ್ತೆಗಾಗಿ ಕಾರ್ಯಾಚರಣೆ: ವರದಿಉತ್ತರಾಖಂಡದಲ್ಲಿ ಹಿಮಕುಸಿತ: 10 ಸಾವು- ಸಿಲುಕಿಕೊಂಡವರ ಪತ್ತೆಗಾಗಿ ಕಾರ್ಯಾಚರಣೆ: ವರದಿ

"ಧೂಮಕೋಟ್‌ನ ಬಿರೋಖಾಲ್ ಪ್ರದೇಶದಲ್ಲಿ ನಿನ್ನೆ ರಾತ್ರಿ ನಡೆದ ಪೌರಿ ಗರ್ವಾಲ್ ಬಸ್ ಅಪಘಾತದಲ್ಲಿ 25 ಜನರು ಸಾವನ್ನಪ್ಪಿದ್ದಾರೆ. ಪೊಲೀಸರು ಮತ್ತು ಎಸ್‌ಡಿಆರ್‌ಎಫ್ ರಾತ್ರೋರಾತ್ರಿ 21 ಜನರನ್ನು ರಕ್ಷಿಸಿದ್ದಾರೆ. ಘಟನೆಯ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ" ಎಂದು ರಾಜ್ಯ ಪೊಲೀಸ್ ಮುಖ್ಯಸ್ಥ ಅಶೋಕ್ ಕುಮಾರ್ ತಿಳಿಸಿದ್ದಾರೆ.

ರಾಜ್ಯ ಪೊಲೀಸ್ ಮುಖ್ಯಸ್ಥರು ರಕ್ಷಣಾ ಕಾರ್ಯಾಚರಣೆಯ ದೃಶ್ಯಗಳನ್ನು ಟ್ವೀಟ್ ಮಾಡಿದ್ದಾರೆ. ಇದರಲ್ಲಿ ರಕ್ಷಣಾ ತಂಡಗಳು ಗಾಯಗೊಂಡ ಪ್ರಯಾಣಿಕರನ್ನು ಸುರಕ್ಷಿತವಾಗಿ ಕರೆದೊಯ್ಯುವುದನ್ನು ಕಾಣಬಹುದು.

ಪೌರಿ ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದ ಬಗ್ಗೆ ಮಾಹಿತಿ ಪಡೆದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಸಚಿವಾಲಯದ ವಿಪತ್ತು ನಿಯಂತ್ರಣ ಅಧಿಕಾರಿಗಳಿಂದ ಅಪಘಾತದ ಬಗ್ಗೆ ವಿವರವಾದ ಮಾಹಿತಿಯನ್ನು ಪಡೆದರು. ಪೌರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಪರಿಹಾರ ಮತ್ತು ರಕ್ಷಣಾ ಕಾರ್ಯವನ್ನು ಅತ್ಯಂತ ಜಾಗರೂಕತೆಯಿಂದ ಕೈಗೊಳ್ಳುವಂತೆ ಸೂಚನೆ ನೀಡಿದರು.

25 Killed After Bus Falls Into Uttarakhand Gorge, 21 Passengers Rescued

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲು ಮತ್ತು ಜಿಲ್ಲೆಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರಲು ರಾಜ್ಯ ವಿಪತ್ತು ನಿಯಂತ್ರಣ ಕೊಠಡಿಯ ಅಧಿಕಾರಿಗಳಿಗೆ ಸೂಚಿಸಿದರು.

ಸರ್ಕಾರದ ಮಟ್ಟದಲ್ಲಿ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುವುದು ಮತ್ತು ಸ್ಥಳೀಯ ಶಾಸಕರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದೇನೆ ಎಂದು ಮುಖ್ಯಮಂತ್ರಿ ಹೇಳಿದರು.

English summary
Uttarakhand Bus Accident: A bus carrying a wedding party falls into gorge, 25 Dead, 21 passengers were rescued. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X